More

    ಬೇಸಿಗೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಣೆಗೆ ಅಧಿಕೃತ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ? ಏನೆಲ್ಲ ನಿಯಮಗಳಿವೆ?

    ಬೆಂಗಳೂರು 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ೋಷಿಸಿರುವ ಬರಪೀಡಿತ ತಾಲ್ಲೂಕುಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನ ಬೇಸಿಗೆ ರಜೆಯಲ್ಲಿ 1ರಿಂದ8 ನೇತರಗತಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ವಿತರಿಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

    ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳಲ್ಲಿ 223 ಬರಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರವು ೋಷಿಸಿದೆ. ಏ.11ರಿಂದ ಮೇ 28ರ ವರೆಗೆ ಒಟ್ಟು 41 ದಿನಗಳ ಕಾಲ ಬೇಸಿಗೆ ರಜೆ ಇರುವುದರಿಂದ ಈ ಅವಧಿಯಲ್ಲಿ ಮಧ್ಯಾಹ್ನದ ಉಪಾಹಾರ ಕಾರ್ಯಕ್ರಮವನ್ನು ಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡುವಂತೆ ಶಾಲಾ ಶಿಕ್ಷಣ ಆಯುಕ್ತರು ಸೂಚಿಸಿದ್ದಾರೆ.

    ಕೇಂದ್ರ ಸರ್ಕಾರದ ಪಿಎಂ ಪೋಷಣ್ ವಿಭಾಗದಿಂದ ಬಿಸಿಯೂಟಕ್ಕಾಗಿ ಶೇ.60:40ರ ಅನುಪಾತದಲ್ಲಿ ಒಟ್ಟು 88.40 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ 55.82 ಕೋಟಿ ರೂ. ಮತ್ತು ರಾಜ್ಯದ 32.58 ಕೋಟಿ ರೂ.ಗಳನ್ನು ನಿಗದಿಮಾಡಲಾಗಿದೆ.

    ಸುಪ್ರೀಂಕೋರ್ಟ್ ಆದೇಶದಂತೆ ಬರಗಾಲಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಿಗೆ ಬಿಸಿಯೂಟ ನೀಡಬೇಕೆಂಬ ಆದೇಶವಿದೆ. ಇದನ್ನು ಎಲ್ಲ ಶಾಲೆಗಳು ಪಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

    ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಬಿಸಿಯೂಟ ವಿತರಿಸುವ ಅಡುಗೆ ಕೇಂದ್ರಗಳನ್ನು ಗುರುತಿಸುವುದು, ಕೇಂದ್ರವನ್ನು ಅಂತಿಮಗೊಳಿಸುವುದು ಸೇರಿ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts