ಸಂಚಾರಿ ಪೊಲೀಸರ ನಿಯೋಜಿಸಿ!

blank

ವಿಜಯವಾಣಿ ಸುದ್ದಿಜಾಲ ಕುಂದಾಪುರ

ತಲ್ಲೂರು ಗ್ರಾಮ ಪಂಚಾಯಿತಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಮಕ್ಕಳ ಗ್ರಾಮಸಭೆ ನಡೆಯಿತು.

ವಿವಿಧ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಮನವಿ ಮಾಡಿದ್ದು, ಶಾಲೆಗೆ ಆಗಮಿಸುವಾಗ ಹಾಗೂ ತೆರಳುವಾಗ ತಲ್ಲೂರು ಜಂಕ್ಷನ್ ಬಳಿ ಹೆದ್ದಾರಿ ದಾಟಲು ಭಯವಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಸಂಚಾರಿ ಪೊಲೀಸರನ್ನು ನಿಯೋಜಿಸಬೇಕು. ಜತೆಗೆ ತಲ್ಲೂರುನೇರಳಕಟ್ಟೆ ರಸ್ತೆಯಲ್ಲಿ ಜೀಬ್ರಾ ಪಟ್ಟಿ ಹಾಕಿಸಬೇಕು ಎಂದು ಬೇಡಿಕೆ ಮುಂದಿಟ್ಟರು.

ಅಧ್ಯಕ್ಷ ಗಿರೀಶ್ ಎಸ್.ನಾಯ್ಕ ಪ್ರತಿಕ್ರಿಯಿಸಿ, ಮಕ್ಕಳಿಂದ ಹಲವು ಅಗತ್ಯ ಬೇಡಿಕೆಗಳಿಗೆ ಮನವಿ ಬಂದಿದ್ದು, ಪಂಚಾಯಿತಿ ವತಿಯಿಂದ ಎಲ್ಲವನ್ನೂ ಈಡೇರಿಸಲು ಪ್ರಯತ್ನಿಸಲಾಗುವುದು. ಉಪ್ಪಿನಕುದ್ರು ಶಾಲೆಯ ಸಮಸ್ಯೆ ಬಗ್ಗೆ ಸಂಬಂಧಿತ ಇಲಾಖೆಯ ಗಮನಕ್ಕೆ ತಂದಿದ್ದೇವೆ. ಶಾಲೆಗಳಲ್ಲಿ ಇಂಗುಗುಂಡಿ ರಚನೆ, ರಸ್ತೆಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುಮಾರ್ ತಲ್ಲೂರು ಮಾತನಾಡಿ, ಮಕ್ಕಳು ಈ ಹಂತದಲ್ಲಿ ಕಲಿಕೆಗೆ ಆದ್ಯತೆ ನೀಡಬೇಕು. ಶಾಲೆಗಳಿಗೆ ಬೇಕಾದ ಮೂಲಸೌಕರ್ಯ ಅಗತ್ಯತೆಗಳ ಬಗ್ಗೆ ಪಂಚಾಯಿತಿ ಗಮನಹರಿಸಲಿದೆ ಎಂದರು.

ಶಿಕ್ಷಣ ಸಂಯೋಜಕ ನಾಗೇಶ್ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದುದು. ಇತ್ತೀಚಿನ ದಿನಗಳಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲೇ ಹೊರಗುಳಿಯುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

ನೋಡಲ್ ಅಧಿಕಾರಿ ಮಹದೇವ್, ಉಪಾಧ್ಯಕ್ಷೆ ಚಂದ್ರಮತಿ ಹೆಗ್ಡೆ, ಕಾರ‌್ಯದರ್ಶಿ ರತ್ನಾ, ನಮ್ಮ ಭೂಮಿಯ ಆಶಾ, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಅಂಗನವಾಡಿ ಶಿಕ್ಷಕಿಯರು, ಗ್ರಾ.ಪಂ ಸಿಬಂದಿ ಉಪಸ್ಥಿತರಿದ್ದರು.

ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸುಮಾ ಪ್ರಸ್ತಾವನೆಗೈದರು. ಪಿಡಿಒ ನಾಗರತ್ನ ನಿರೂಪಿಸಿದರು.

ಕಿರು ಪ್ರಹಸನ ಪ್ರದರ್ಶನ

ಆರೋಗ್ಯ ಇಲಾಖೆ ಸಿಎಚ್‌ಒ ರಕ್ಷಿತಾ, ಸಮಾಜ ಕಲ್ಯಾಣ ಇಲಾಖೆಯ ಗೋಪಾಲ ದೇವಾಡಿಗ, ಗ್ರಂಥಪಾಲಕಿ ದೀಪಾ ತಮ್ಮ ಇಲಾಖೆ ಬಗ್ಗೆ ಮಾಹಿತಿ ನೀಡಿದರು. ರಾಜಾಡಿ ಅಂಗನವಾಡಿ ಕೇಂದ್ರ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಗೃತಿ ಕುರಿತು ಕಿರು ಪ್ರಹಸನ ಪ್ರದರ್ಶನಗೊಂಡಿತು.

ಮಕ್ಕಳಿಂದ ಅಹವಾಲು ಸಲ್ಲಿಕೆ

ಮಕ್ಕಳು ಪ್ರಮುಖ ಸಮಸ್ಯೆಗಳ ಕುರಿತು ಪಟ್ಟಿ ಮಾಡಿ ಮನವಿ ಸಲ್ಲಿಸಿದರು. ತಲ್ಲೂರು ಪ್ರೌಢಶಾಲೆಯಲ್ಲಿ ಮಾಡುಗಳು ಸೋರುತ್ತಿವೆ. ಕುಡಿಯುವ ನೀರಿನ ಸಮಸ್ಯೆಯಿದೆ. ಶಾಲೆ ಬಳಿ ಕರ್ಕಶ ಹಾರ್ನ್ ಹಾಕುವುದರಿಂದ ತೊಂದರೆಯಾಗುತ್ತಿದ್ದು, ಫಲಕಗಳ ಅಳವಡಿಸಬೇಕು. ಶಾಲಾ ಮೈದಾನದಲ್ಲಿ ಮಕ್ಕಳ ಆಟದ ಅವಧಿಯಲ್ಲಿ ಖಾಸಗಿ ವಾಹನಗಳ ಚಾಲನಾ ತರಬೇತಿ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಉಪ್ಪಿನಕುದ್ರು ಪ್ರೌಢಶಾಲೆಗೆ ಪ್ರಯೋಗಾಲದ ವಸ್ತುಗಳು ಬೇಕಾಗಿರುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು.

ಹಾಡಿಕೆರೆ ದೇಗುಲ ಧಾರ್ಮಿಕ ಕಾರ್ಯಕ್ರಮ

ಜಗತ್ತಿನ ಒಳಿತಿಗೆ ಧಾರ್ಮಿಕ ಕೈಂಕರ್ಯ

 

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…