ಕಲಬುರಗಿ: ಡಿಸಿಎಂ ಹುದ್ದೆ ನನಗೆ ನೀಡುವುದು ಅಥವಾ ನನಗೆ ನೀಡಲೆಂದು ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಸುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಖಾಸಗಿ ಕಾರ್ಯಕ್ರಮದಲ್ಲಿ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ನಾನೂ ಅದಕ್ಕೆ ಹೊರತಾಗಿಲ್ಲ ಎಂದು ತಿಳಿಸಿದರು.
ನನಗೆ ಡಿಸಿಎಂ ಹುದ್ದೆ ನೀಡಬೇಕು ಎಂಬುದು ವಾಲ್ಮೀಕಿ ಸಮುದಾಯದ ಸ್ವಾಮೀಜಿ ಮತ್ತು ಸಮಾಜದ ಜನರ ಅಪೇಕ್ಷೆ ಹೊರತು ನನ್ನದಲ್ಲ. ಆದರೆ ಹುದ್ದೆ ನೀಡುವುದು, ಬಿಡುವುದು ಪಕ್ಷದ ಹಿರಿಯರು ಮತ್ತು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಕೊಟ್ಟರೂ ಸರಿ, ಕೊಡದಿದ್ದರೂ ಸರಿ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.