More

    ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಸೆರೆ

    ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ‘ಎಕ್ಸೃ್’ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಾರ್ಟಿಯ ಐಟಿ ಸೆಲ್ ಉದ್ಯೋಗಿಯನ್ನು ಪೂರ್ವ ವಿಭಾಗ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

    ಕರೀಂನಗರ ನಿವಾಸಿ ರವಿಕಾಂತಿ ಶರ್ಮಾ (33) ಬಂಧಿತ. ಬಿಆರ್‌ಎಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಆರೋಪಿ, ಪಕ್ಷದ ಐಟಿ ಸೆಲ್ ಉದ್ಯೋಗಿ ಸಹ ಆಗಿದ್ದ. ಈತನ ಪಾಲಕರು ಕೂಡ ಬಿಆರ್‌ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಅನುಷ್ಠಾನದ ಕುರಿತು ಆರೋಪಿಯು ‘ಎಕ್ಸ್’ನಲ್ಲಿ ಇಂಧನ ಸಚಿವರ ನಕಲಿ ಆಡಿಯೋ ತುಣುಕು ಪ್ರಸಾರ ಮಾಡಿದ್ದ. ಈ ಸಂಬಂಧ ಪೂರ್ವ ವಿಭಾಗ ಸಿಇಎನ್ ಠಾಣೆಗೆ ನ.28ರಂದು ಬೆಸ್ಕಾಂ ಜನರಲ್ ಮ್ಯಾನೇಜರ್ ದೂರು ಸಲ್ಲಿಸಿದ್ದರು. ಇನ್‌ಸ್ಪೆಕ್ಟರ್ ಎಸ್.ಎಂ. ಉಮೇಶ್‌ಕುಮಾರ್ ನೇತೃತ್ವದ ತಂಡವು, ‘ಎಕ್ಸ್’ ಖಾತೆಗೆ ನೋಂದಣಿ ಆಗಿದ್ದ ಮೊಬೈಲ್ ಸಂಖ್ಯೆ ಜಾಡು ಹಿಡಿದಾಗ ರವಿಕಾಂತಿ ಶರ್ಮಾ ತಂದೆಯ ಹೆಸರಿನಲ್ಲಿ ಇರುವುದು ಗೊತ್ತಾಗಿದೆ.

    ಈ ಮೇರೆಗೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts