More

    ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್; ದೂರು ದಾಖಲಿಸಿದ ಶ್ರೀನಿವಾಸ್

    ಬೆಂಗಳೂರು: ಐಟಿ/ಬಿಟಿ ಸಚಿವ(IT/BT Minister) ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್(Derogatory post) ಮಾಡಿದ್ದು, ಇದನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ತೀವ್ರವಾಗಿ ಖಂಡಿಸಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್​ ಒಂದು ಕಡೆ ಕೊಟ್ಟು ಮತ್ತೊಂದೆಡೆ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ: ಸಿ.ಟಿ. ರವಿ

    ಸಾಮಾಜಿಕ ಜಾಲತಾಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಅವರ ಫೋಟೋವನ್ನು ಎಡಿಟ್ ಮಾಡಿ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕಾಂಗ್ರೆಸ್ ಮಾಧ್ಯಮ ವಕ್ತಾರ ಶ್ರೀನಿವಾಸ್ ದೂರು ದಾಖಲಿಸಿದ್ದು, ಶೀಘ್ರವೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ಕ್ರೈಂ(Cyber Crime) ಪೊಲೀಸರನ್ನು ಒತ್ತಾಯಿಸಿದ್ದಾರೆ.

    ಈ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವ ಶ್ರೀನಿವಾಸ್, “ಪ್ರಿಯಾಂಕ್ ಖರ್ಗೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ಪ್ರಿಯಾಂಕ್ ಅವರ ಫೋಟೋ ಎಡಿಟ್ ಮಾಡಿ, ಪೋಸ್ಟ್ ಮಾಡಿರೋ ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕು” ಎಂದು ಹೇಳಿದ್ದಾರೆ.

    ಇದನ್ನೂ ಓದಿ: ರಾಜ್ಯ ಸರ್ಕಾರ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ: ಮಾಜಿ ಸಚಿವ ಸುನೀಲ್​ ಕುಮಾರ್
    “ಇದರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರ ಘನತೆಗೆ ದಕ್ಕೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೂ, ಕರ್ನಾಟಕದ ಜನತೆಗೂ ಮತ್ತು ಕರ್ನಾಟಕ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಬೇಲಿಯೇ ಎದ್ದು ಹೊಲ ಮೇಯ್ದಾಗ; ಚಿನ್ನ ಸ್ಮಗ್ಲಿಂಗ್​ನಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಅಂದರ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts