ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು?: ಗೃಹ ಸಚಿವ ಡಾ.ಜಿ.ಪರಮೇಶ್ವರ್​

g parameshwara
Published on

ತುಮಕೂರು: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ, ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್​ ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದು ದೇಶಾದ್ಯಂತ ವಿವಾದವನ್ನು ಎಬ್ಬಿಸಿದೆ. ಈ ಮಧ್ಯೆ ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಿಂದೂ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಇಂದು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು ಎಂಬುದೇ ಪ್ರಶ್ನೆ? ಎಂಬ ಹೇಳಿಕೆಯೊಂದನ್ನು ನೀಡಿದ್ದಾರೆ.

ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟು ಹಾಕಿದ್ರು ಎಂಬುದೇ ಇನ್ನೂ ಪ್ರಶ್ನೆಯಾಗಿ ಉಳಿದಿದೆ. ನಮ್ಮ ದೇಶದಲ್ಲಿ ಬೌದ್ಧ ಧರ್ಮ ಮತ್ತು ಜೈನ ಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶದಿಂದ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ನಮ್ಮ ದೇಶಕ್ಕೆ ಬಂದಿವೆ. ಪ್ರಪಂಚದ ಎಲ್ಲ ಧರ್ಮಗಳ ಸಾರಾಂಶ ಒಂದೇ, ಮನುಕುಲಕ್ಕೆ ಒಳ್ಳೆಯದಾಗಲಿ ಎಂಬುದು ಎಂದು ಅವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net