More

    ಅಭಿವೃದ್ಧಿ ಶೂನ್ಯವಾಗಿದ್ದರೂ ಕಮಿಷನ್ ದಂಧೆ ಜೋರು

    ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಆಧಾರ ರಹಿತ ಆರೋಪ ಮಾಡಿದ್ದ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ, ಇದೀಗ ಕಾಂಗ್ರೆಸ್ ಸರ್ಕಾರದ ಮೇಲೂ ಶೇ.40 ಕಮಿಷನ್ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದರೂ ಕಮಿಷನ್ ದಂಧೆ ನಡೆಯುತ್ತಿರುವುದು ಅಚ್ಚರಿಯ ವಿಷಯ. ವರ್ಗಾವಣೆ ಹಾಗೂ ಹಳೆಯ ಕಾಮಗಾರಿಗಳ ಹಣದಲ್ಲೇ ಕಮಿಷನ್ ಪಡೆಯಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಆರೋಪಿಸಿದರು.

    ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳಾಗಿದೆ. ಇಷ್ಟರೊಳಗೆ ಎಲ್ಲ ಶಾಸಕರಿಗೆ ಮೊದಲ ವರ್ಷದ 2 ಕೋಟಿ ರೂ. ಅನುದಾನ ಬಿಡುಗಡೆ ಆಗಬೇಕಿತ್ತು. ಆದರೆ 50 ಲಕ್ಷ ರೂ. ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದನ್ನೂ ಇನ್ನೂ ಕೊಟ್ಟಿಲ್ಲ. ಶಿವಮೊಗ್ಗದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಶಾಸಕರಿಗೆ ತಲಾ ಒಂದು ಕೋಟಿ ರೂ. ಅನುದಾನ ಬಿಡುಗಡೆ ಆಗಬೇಕಿತ್ತು. ಅದು ಕೂಡ ಬಂದಿಲ್ಲ. ಇದನ್ನೆಲ್ಲ ಗಮನಿಸಿದರೆ ಸರ್ಕಾರ ಯಾವ ಮಟ್ಟಕ್ಕೆ ಹೋಗಿದೆ ಎಂದು ಆಲೋಚಿಸಬಹುದಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಗುರುವಾರ ನಡೆಸಿದ ಜನಸ್ಪಂದನೆ ವೇಳೆ 12,372 ಅರ್ಜಿಗಳು ಬಂದಿವೆ ಎಂದು ಹೇಳಲಾಗಿದೆ. ಅಂದರೆ ಕಳೆದ ಜನಸ್ಪಂದನೆಗೆ ಹೋಲಿಸಿದರೆ ಈ ಬಾರಿ ಮೂರು ಪಟ್ಟು ಅರ್ಜಿಗಳು ಬಂದಂತಾಗಿದೆ. ಸರ್ಕಾರ ಈ ಅರ್ಜಿಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವ ಜಿಲ್ಲೆ, ಯಾವ ತಾಲೂಕು, ಯಾವ ಇಲಾಖೆ ಎಂದು ಸೂಕ್ತವಾಗಿ ಅರ್ಜಿಗಳನ್ನು ವಿಂಗಡಿಸಬೇಕು. ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts