ಇಬ್ಬರು ಸರಗಳ್ಳರ ಬಂಧನ

ಅರಸೀಕೆರೆ: ಇಬ್ಬರು ಸರಗಳ್ಳರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲ್ (28), ತಿಪಟೂರು ತಾಲೂಕಿನ ಬಿದರೆಗುಡಿ ಗ್ರಾಮದ ಗೌತಮ್(29) ಬಂಧಿತ ಆರೋಪಿಗಳು.

ಪಟ್ಟಣದ ಮಿನಿ ವಿಧಾನಸೌಧದ ಬಳಿ ಬೈಕ್‌ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಪೊಲೀಸರು ಸೂಕ್ಷ್ಮವಾಗಿ ಗಮನಿಸಿಇಬ್ಬರನ್ನೂ ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ. ಸರಗಳ್ಳತನ ಮಾಡಲು ತಾವು ಹೊಂಚು ಹಾಕುತ್ತಿದ್ದಾಗಿ ಒಪ್ಪಿಕೊಂಡಿದ್ದಾರೆ.

25 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರವಾಹನವನ್ನು ಪೊಲೀಸರು ಇದೇ ವೇಳೆ ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿ

Leave a Reply

Your email address will not be published. Required fields are marked *