More

  ಕಾನೂನು ಸುವ್ಯವಸ್ಥೆ ಹದಗೆಟ್ಟಿಗೆ

  ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಡ್ರಗ್ಸ್, ಗಾಂಜಾ ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಎಂಎಲ್‌ಸಿ ಪ್ರದೀಪ ಶೆಟ್ಟರ್ ಆರೋಪಿಸಿದರು.
  ಮೃತ ಅಂಜಲಿ ಮನೆಗೆ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು.
  ನಮ್ಮ ಸರ್ಕಾರ ಇದ್ದಾಗ ನೈಟ್ ಪಾರ್ಟಿಗಳಿಗೆ ಅನುಮತಿ ನೀಡಿರಲಿಲ್ಲ. ಈ ಸರ್ಕಾರ ನೀಡಿದ್ದರ ಪರಿಣಾಮದಿಂದ ಈಗ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿದರಲ್ಲದೇ, ಅಂಜಲಿ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts