More

    ದುಶ್ಚಟದಿಂದ ದೂರವಾಗಲು ದೃಢನಿಶ್ಚಯ ಮುಖ್ಯ

    ಧಾರವಾಡ: ತಂಬಾಕಿನ ದುಶ್ಚಟದಿಂದ ಎಲ್ಲರೂ ದೂರವಾಗಲು ದೃಢನಿಶ್ಚಯ ಮಾಡಬೇಕು. ಉತ್ತಮ ಆಹಾರ ಸೇವೆನೆಯ ಮೂಲಕ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಽÃಶ ಪಿ.ಎಫ್. ದೊಡ್ಡಮನಿ ಹೇಳಿದರು.
    ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಽಕಾರಿ ಡಾ. ಶಶಿ ಪಾಟೀಲ ಮಾತನಾಡಿ, ಸದೃಢ ಭಾರತ ನಿರ್ಮಾಣಕ್ಕೆ ಸದೃಢ ಯುವಶಕ್ತಿಯ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದಂತೆ ಶಿಕ್ಷಕರು ತಿಳಿವಳಿಕೆ ನೀಡಬೇಕು ಎಂದರು.
    ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸರ್ವೇಕ್ಷಣಾ ಅಽಕಾರಿ ಡಾ. ಸುಜಾತಾ ಹಸವಿಮಠ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಎನ್‌ಸಿಎಚ್‌ಒ ಕಾರ್ಯಕ್ರಮ ಅಽಕಾರಿ ಡಾ. ಉಮೇಶ ಎಚ್.ಎಂ. ಅವರು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿದರು.
    ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ದೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ತಂಬಾಕು ವ್ಯಸನದಿಂದ ಮುಕ್ತರಾದವರನ್ನು ಸನ್ಮಾನಿಸಲಾಯಿತು. ಬಿ.ಆರ್. ಪಾತ್ರೋಟ ನಿರೂಪಿಸಿದÀರು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts