ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕ, ನ್ಯಾಯಾಧೀಶ ನಾಗೇಶಮೂರ್ತಿ ಅಭಿಮತ

1 Min Read
ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕ, ನ್ಯಾಯಾಧೀಶ ನಾಗೇಶಮೂರ್ತಿ ಅಭಿಮತ
ದೇವದುರ್ಗದ ಡಾನ್ ಬೋಸ್ಕೋ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ನಾಗೇಶಮೂರ್ತಿ ಭಾನುವಾರ ಉದ್ಘಾಟಿಸಿದರು.

ದೇವದುರ್ಗ: ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ಆಳವಾಗಿ ಬೇರೂರಿದ್ದು, ಅದನ್ನು ನಿಯಂತ್ರಿಸದಿದ್ದರೆ ಸಮಾಜಕ್ಕೆ ಮಾರಕವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಬಿ.ಕೆ.ನಾಗೇಶ ಮೂರ್ತಿ ಹೇಳಿದರು.

ಪಟ್ಟಣದ ಡಾನ್ ಬೋಸ್ಕೋ ಶಾಲೆಯಲ್ಲಿ ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಪಂ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ಶಿಶು ಅಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು.

ಮಕ್ಕಳಿಗೆ ಶಿಕ್ಷಣ ಅತಿ ಮುಖ್ಯ. ಆದರೆ, ಪಾಲಕರು ಶಿಕ್ಷಣ ನೀಡುವುದನ್ನು ಬಿಟ್ಟು ಕೆಲಸಕ್ಕೆ ಕಳುಹಿಸುತ್ತಿರುವುದು ವಿಷಾದನೀಯ. ಉತ್ತಮ ಶಿಕ್ಷಣ ಒದಗಿಸಿದಾಗ ಮಕ್ಕಳು ಉತ್ತಮ ನಾಗರಿಕರಾಗಿ ರೂಪಗೊಳ್ಳಲು ಸಾಧ್ಯ. ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದು ಮಹಾ ಅಪರಾಧ ಎಂದು ಹೇಳಿದರು.

See also  ಎನ್‌ಆರ್‌ಬಿಸಿ ಕಾಮಗಾರಿ ತನಿಖೆಯಾಗಲಿ ; ಜೆಡಿಎಸ್‌ನ ಜಿಲ್ಲಾ ಘಟಕದ ಒತ್ತಾಯ
Share This Article