More

    ದುಡಿಮೆ ಅವಧಿ ಹೆಚ್ಚಳಕ್ಕೆ ಖಂಡನೆ; ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    ದೇವದುರ್ಗ: ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಕಾರ್ಮಿಕರ ಕೆಲಸದ ಅವಧಿ 12ಗಂಟೆಗೆ ಹೆಚ್ಚಳ ಮಾಡಿರುವುದು ಖಂಡಿಸಿ ಪಟ್ಟಣದ ಮಿನಿವಿಧಾನಸೌಧ ಮುಂದೆ ಜೆಸಿಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದವು.

    ಇದನ್ನೂ ಓದಿರಿ: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

    ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಜಮಾವಣೆಗೊಂಡ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ಮಿನಿವಿಧಾನಸೌಧವರೆಗೆ ರ‌್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾರ್ಮಿಕರ ಹಿತ ಕಡೆಗಣಿಸಿ ಬಂಡವಾಳಗಾರರಿಗೆ ಅನುಕೂಲವಾಗುವ ಕಾಯ್ದೆ, ಕಾನೂನು ಜಾರಿಗೊಳಿಸಲಾಗುತ್ತಿದೆ.

    ಕಾರ್ಪೋರೇಟ್ ಕಂಪನಿಗಳು ತಮ್ಮಲ್ಲಿ ದುಡಿಯವಂಥ ಕಾರ್ಮಿಕರನ್ನು ಶೋಷಣೆ ಮಾಡುತ್ತಿವೆ. ಇದರಿಂದ ಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.

    ಕೂಡಲೇ ದುಡಿತದ ಅವಧಿಯನ್ನು ದಿನಕ್ಕೆ 12ಗಂಟೆಗೆ ಹೆಚ್ಚಿಸಿದ ಆದೇಶ ಹಿಂಪಡೆಯಬೇಕು. ಕನಿಷ್ಠ 31500 ರೂ. ವೇತನ ನೀಡಬೇಕು. ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದುಮಾಡಬೇಕು.

    ಸಾರ್ವಜನಿಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ ಕನಿಷ್ಠ 8ಸಾವಿರ ರೂ. ಪಿಂಚಣಿ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಹಾಗೂ ನಗದೀಕರಣ ಕೈಬಿಡಬೇಕು. ನರೇಗಾ ಯೋಜನೆಯಡಿ 200ದಿನ ಕೆಲಸ ನೀಡಬೇಕು.

    ಆಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕು. ವಲಸೆ ಕಾರ್ಮಿಕರಿಗೆ ಸೇವಾ ಭದ್ರತೆ, ಪಡಿತರ ವ್ಯವಸ್ಥೆ ಕಲ್ಪಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲಬೆಲೆ ಖಾತ್ರಿಗೊಳಿಸಿ, ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು.

    ಸಿಐಟಿಯು ತಾಲೂಕು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಮರಿಯಮ್ಮ, ರಮಾದೇವಿ, ಈರಮ್ಮ, ಗೌರಿ ಪಿ.ಹೊಸಮನಿ, ಶ್ರೀಲೇಖಾ, ಚಂದ್ರಕಲಾ, ಸೂಗಮ್ಮ, ವಿಜಯಲಕ್ಷ್ಮೀ, ಸಂಗಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts