ದೇವದುರ್ಗ: ಈಡೀಸ್ ಎನ್ನುವ ಸೊಳ್ಳೆ ಕಡಿತದಿಂದ ಡೆಂಘೆ ಜ್ವರ ಹರಡುತ್ತಿದ್ದು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ರೋಗಲಕ್ಷಣ ಕಂಡು ಬಂದರೆ ತಕ್ಷಣವೇ ಪರೀಕ್ಷೆ ಮಾಡಿ ಚಿಕಿತ್ಸೆ ಪಡೆಯಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಬನದೇಶ್ವರ ಹೇಳಿದರು.
ಇದನ್ನೂ ಓದಿ:ಡೆಂಘೆ ಜ್ವರ ನಿಯಂತ್ರಣಕ್ಕೆ ತುರ್ತು ಕ್ರಮ: ಕೆಡಿಪಿ ಪ್ರಗತಿಪರಿಶೀಲನಾ ಸಭೆಯಲ್ಲಿ ಜಲಂಧರ್ ಶೆಟ್ಟಿ ನಿರ್ದೇಶನ
ಪಟ್ಟಣದ ತಾಪಂ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ, ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ಯಾರಾಮೆಡಿಕಲ್ ಕಾಲೇಜಿನಿಂದ ಆಯೋಜಿಸಿದ್ದ ಡೆಂಘೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.
ಇದನ್ನೂ ಓದಿ:ದೇವದುರ್ಗದಲ್ಲಿ ಸರಣಿ ಕಳ್ಳತನ
ರಾಜ್ಯದಲ್ಲಿ ಡೆಂಘೆ ಪ್ರಕರಣಗಳು ದಿನೇದಿನೆ ಹೆಚ್ಚಾಗಿ ಕಂಡುಬರುತ್ತಿವೆ. ಹೀಗಾಗಿ ಜ್ವರದ ಬಗ್ಗೆ ಎಚ್ಚರಿಕೆವಹಿಸಬೇಕಿದೆ. ರೋಗಲಕ್ಷಣಗಳು ಕಂಡು ಬಂದ ಕೂಡಲೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಡೆಂಘೆ ಜ್ವರಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣದ ಮೇಲೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಜ್ವರದ ಬಗ್ಗೆ ಎಚ್ಚರಿಕೆವಹಿಸುವುದು ಅಗತ್ಯವಾಗಿದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ ಜಾಥಾಕ್ಕೆ ಚಾಲನೆ ನೀಡಿದರು. ಅಂಬೇಡ್ಕರ್ ವೃತ್ತ, ಮಹಾತ್ಮಗಾಂಧಿ ವೃತ್ತ, ಬಸವೇಶ್ವರ ಚೌಕ್, ಸಾರ್ವಜನಿಕ ಆಸ್ಪತ್ರೆ ರಸ್ತೆ, ಪೊಲೀಸ್ ಠಾಣೆ ರಸ್ತೆ ಮಾರ್ಗದ ಮೂಲಕ ಮಿನಿವಿಧಾನಸೌಧದವರೆಗೆ ಜಾಥಾ ಜರುಗಿತು. ತಾಪಂ ಇಒ ಬಸವರಾಜ ಹಟ್ಟಿ, ಮಾಧವನಂದ, ಪಿಐ ಅಶೋಕ ಸದಲಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ, ಶಿವಪ್ಪ ಭೂಮನಗುಂಡ ಇತರರಿದ್ದರು.