More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಗೆ ಸಹಕರಿಸಿ

    ದೇವದುರ್ಗ:ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವಲ್ಲಿ ಎಸ್ಸೆಸ್ಸೆಲ್ಸಿ ಬಹುಮುಖ್ಯ ಘಟ್ಟವಾಗಿದ್ದು, ಮಾ.31ರಿಂದ ಏ.15ರವರೆಗೆ ಪರೀಕ್ಷೆ ನಡೆಯಲಿವೆ. ಪರೀಕ್ಷೆಗಳನ್ನು ಸುಗಮವಾಗಿ ನಡೆಸಿ ಮೂಲಕ ಯಶಸ್ವಿಗೊಳಿಸಬೇಕು ಎಂದು ತಹಸೀಲ್ದಾರ್ ಕೆ.ವೈ.ಬಿದರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜರುಗಿದ ವಿವಿಧ ಇಲಾಖೆ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಂಗಳವಾರ ಮಾತನಾಡಿದರು. ವಿದ್ಯಾರ್ಥಿಗಳು ಯಾವುದೇ ಆತಂಕ, ಭಯವಿಲ್ಲದೆ ಪರೀಕ್ಷೆ ಎದುರಿಸುವ ವಾತಾವರಣ ನಿರ್ಮಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಕುಡಿವ ನೀರು, ಶೌಚಗೃಹ ವ್ಯವಸ್ಥೆ, ವಿದ್ಯುತ್ ಅಗತ್ಯ ಸೌಲಭ್ಯ ಕಲ್ಪಿಸಲು ಇಲಾಖೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದರು.

    ಬಿಇಒ ಸುಖದೇವ್ ಮಾತನಾಡಿ, ತಾಲೂಕಿನಲ್ಲಿ 16 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 4,233 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. 310 ಕೊಠಡಿ ಮೇಲ್ವಿಚಾರಕರು, 16 ಮುಖ್ಯ ಅಧೀಕ್ಷಕರು, 2 ಉಪ ಅಧೀಕ್ಷಕರು, 7 ಮಾರ್ಗಧಿಕಾರಿಗಳು, 16 ಜಾಗೃತದಳ,16 ಅಭೀರಕ್ಷಕರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.ಗ್ರೇಡ್-2 ತಹಸೀಲ್ದಾರ್‌ಶ್ರೀನಿವಾಸ್ ಚಾಪೇಲ್, ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್, ಶಿವರಾಜ ಪೂಜಾರಿ, ಅಕ್ಷರ ದಾಸೋಹ ಅಧಿಕಾರಿ ಬಂದೋಲಿ ಸಾಬ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts