More

    ಪತ್ರಕರ್ತರಿಗೂ ಕರೊನಾ ಪ್ಯಾಕೇಜ್ ನೀಡಿ

    ದೇವದುರ್ಗ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಗುರಿಯಾಗಿರುವ ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರಿಗೂ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ ಒತ್ತಾಯಿಸಿದೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ್ ನಾಗರಾಜಗೆ ಮಂಗಳವಾರ ಸಲ್ಲಿಸಿತು. ಲಾಕ್‌ಡೌನ್ ಸಮಯದಲ್ಲಿ ಪತ್ರಕರ್ತರು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮನೆ, ಕುಟುಂಬದ ಸದಸ್ಯರ ಸುರಕ್ಷತೆ ಲೆಕ್ಕಿಸದೆ ವರದಿ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಸುದ್ದಿ ಕೊಡುವ ಜತೆಗೆ ಕರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹಲವು ಪತ್ರಕರ್ತರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರಿಂದ ಅವರ ಕುಟುಂಬದ ಸದಸ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿವೆ ಎಂದು ಮನವಿಯಲ್ಲಿ ಅಳಲು ತೋಡಿಕೊಳ್ಳಲಾಗಿದೆ.

    ಪ್ರತಿಯೊಬ್ಬ ಪತ್ರಕರ್ತಗೆ 10 ಸಾವಿರ ರೂ. ನೆರವು ಘೋಷಣೆ ಮಾಡಿ, ಅವರ ಕುಟುಂಬಗಳಿಗೆ ಆಹಾರದ ಕಿಟ್ ನೀಡಬೇಕು. ಗ್ರಾಮೀಣ, ಹೋಬಳಿ, ತಾಲೂಕು ಮಟ್ಟದ ಪತ್ರಕರ್ತರಿಗೆ ಆದ್ಯತೆ ಮೇರೆಗೆ ಜಾಹೀರಾತು ನೀಡುವ ಮೂಲಕ ನೆರವಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಂಘದ ಸದಸ್ಯರಾದ ನಾಗರಾಜ ತೇಲ್ಕರ್, ರವಿಕುಮಾರ ಪಾಟೀಲ್ ಅಳ್ಳುಂಡಿ, ಮಾರ್ಕಂಡಯ್ಯ, ರಾಮಣ್ಣ ನಾಯಕ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts