More

    ವೇತನವಿಲ್ಲದೆ ಜೀವನ ನಡೆಸುವುದೆ ದುಸ್ತರ; ಹಾಸ್ಟೆಲ್ ಅಡುಗೆ ಸಿಬ್ಬಂದಿ ಪ್ರತಿಭಟನೆ


    ದೇವದುರ್ಗ: ಸಮಾಜ ಕಲ್ಯಾಣ ಇಲಾಖೆಯ ವಿವಿಧ ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುವ ಅಡುಗೆ ತಯಾರಕರು ಹಾಗೂ ಸಿಬ್ಬಂದಿ ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಕಚೇರಿಯೊಳಗೆ ಕುಳಿತು ಸೋಮವಾರ ಪ್ರತಿಭಟನೆ ನಡೆಸಿದರು.

    ಸುಮಾರು 8 ತಿಂಗಳಿನಿಂದ ವೇತನ ನೀಡಿಲ್ಲ. ಹಾಸ್ಟೆಲ್‌ಗಳಲ್ಲಿ 30ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದು, ವೇತನವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ಮಕ್ಕಳ ಶಾಲಾ ಶುಲ್ಕ, ಸಾಂಸಾರಿಕ ಹಾಗೂ ಚಿಕಿತ್ಸಾ ವೆಚ್ಚ ಭರಿಸುವುದು ಸಮಸ್ಯೆಯಾಗಿದೆ. ವೇತನ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಅನುದಾನವಿಲ್ಲ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಬಾಕಿ ವೇತನ ನೀಡಬೇಕು. ಪ್ರತಿ ತಿಂಗಳು ನಿಗದಿತವಾಗಿ ವೇತನ ನೀಡಬೇಕೆಂದು ಒತ್ತಾಯಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts