More

    ಸೆಲ್‌ನಲ್ಲಿ ಬಂಧಿಯಾದ ಕೋತಿ; ಅರಣ್ಯ ಸಿಬ್ಬಂದಿ ಕಾರ್ಯಾಚರಣೆ

    ದೇವದುರ್ಗ: ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ನಿತ್ಯ ಪೊಲೀಸರಿಗೆ ಕಿರಿಕಿರಿ ಕೊಡುತ್ತಿದ್ದ ಕೋತಿಯನ್ನು ಅರಣ್ಯ ಇಲಾಖೆ ಮಂಗಳವಾರ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.

    ಠಾಣೆ ಆವರಣದಲ್ಲಿನ ಮರಗಳಲ್ಲಿ ಕಳೆದೊಂದು ವಾರದಿಂದ ವಾಸವಾಗಿದ್ದ ಕೋತಿ, ಠಾಣೆಗೆ ನುಗ್ಗಿ ಪೊಲೀಸರ ಮೇಲೆ ದಾಳಿ ಮಾಡುತ್ತಿತ್ತು. ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ಮೇಲೆ ದಾಳಿ ಮಾಡಿ ಗಾಯಗೊಳಿಸಿತ್ತು. ವಾನರ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬೀಸಿದ್ದರೂ ಸಿಕ್ಕಿರಲಿಲ್ಲ. ಠಾಣೆ ಒಳಗೆ ಆರೋಪಿಗಳನ್ನು ಬಂಧಿಸಿಡುವ ಕೋಣೆಯಲ್ಲಿ ಬಾಳೆ ಹಣ್ಣು ಇರಿಸಿ, ಕೋತಿಯನ್ನು ಬಂಧಿಸಲಾಯಿತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಕೋತಿಗೆ ಅರವಳಿಕೆ ಚುಚ್ಚುಮದ್ದು ನೀಡಿದರು. ಕಲಬುರಗಿಯ ಪಶು ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸುವುದಾಗಿ ವಲಯ ಅರಣ್ಯಾಧಿಕಾರಿ ಮಹಮ್ಮದ್ ಅಲ್ಲಾವುದ್ದೀನ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts