More

    ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ, ಸ್ಥಳದಲ್ಲೇ ಪರಿಹಾರ ನೀಡಲು ಸಿದ್ಧತೆ ಮಾಡಿಕೊಳ್ಳಲು ಸೂಚನೆ

    ದೇವದುರ್ಗ: ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಮಾ.19ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್ ಸೂಚಿಸಿದರು.

    ಪಟ್ಟಣದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಸೋಮವಾರ ಮಾತನಾಡಿದರು. ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಅತಿಹೆಚ್ಚು ದೂರುಗಳು ಬರುತ್ತಿವೆ. ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಅಗತ್ಯ ತಯಾರಿ ಮಾಡಿಕೊಳ್ಳಿ ಎಂದು ತಾಕೀತು ಮಾಡಿದರು.

    ಗ್ರಾಮದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ವಿವಿಧ ಯೋಜನೆಗಳ ಆದೇಶ ಪ್ರತಿ ನೀಡಲಾಗುವುದು. ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಥಳೀಯ ಗ್ರಾಪಂನಿಂದ ಅಗತ್ಯ ಪರಿಹಾರ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಅಧಿಕಾರಿಗಳು ಯಾವುದೇ ಕಾರಣ ನೀಡಿ ಗೈರಾಗುವಂತಿಲ್ಲ. ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಚಾಪೇಲ್ ಎಚ್ಚರಿಸಿದರು. ತಾಪಂ ಇಒ ಪಂಪಾಪತಿ ಹಿರೇಮಠ, ಕಂದಾಯ ನಿರೀಕ್ಷಕರಾದ ಭೀಮನಗೌಡ ಪಾಟೀಲ್, ದೇವರೆಡ್ಡಿ, ಅಕ್ಷರ ದಾಸೋಹ ಅಧಿಕಾರಿ ರಾಘವೇಂದ್ರ, ಸಮಾಜ ಕಲ್ಯಾಣಾಧಿಕಾರಿ ದೇವರಾಜ ಬಿಂಗಂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts