More

    ಆರು ಅಂಗಡಿ ವಿರುದ್ಧ ಪ್ರಕರಣ ದಾಖಲು, ನೂರಕ್ಕೂ ಹೆಚ್ಚು ಬೈಕ್‌ಗಳಿಗೆ ದಂಡ

    ದೇವದುರ್ಗ: ಜನತಾ ಕರ್ಫ್ಯೂ ನಿಯಮ ಉಲ್ಲಂಘಿಸಿ ಮನೆಯಿಂದ ಅನಗತ್ಯವಾಗಿ ಹೊರಬರುವವರಿಗೆ ಪೊಲೀಸರು ಚಾಟಿ ಬೀಸುತ್ತಿದ್ದು, ಅನಗತ್ಯವಾಗಿ ಓಡಾಡುವವರ ಬೈಕ್‌ಗಳನ್ನು ವಶಕ್ಕೆ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ.

    ಗಬ್ಬೂರು, ಸಿರವಾರ ಕ್ರಾಸ್, ಅರಕೇರಾ, ಜಾಲಹಳ್ಳಿ, ಪಟ್ಟಣದ ಜೆಪಿ ಸರ್ಕಲ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಹೂವಿನಹೆಡಗಿ ಸೇರಿ ವಿವಿಧೆಡೆ ಪೊಲೀಸ್ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದು, ಜನರ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲಾಗಿದೆ.

    ಪಟ್ಟಣದ ಸಿವಿಲ್ ಹಾಗೂ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ 50ಬೈಕ್ ಸವಾರರಿಗೆ ದಂಡ ವಿಧಿಸಲಾಗಿದೆ. ಮಾಸ್ಕ್ ಧರಿಸದ ನೂರು ಜನರಿಗೆ ದಂಡ ವಿಧಿಸಿದ್ದು, ಆರು ತ್ರಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ದಂಡ ವಿಧಿಸಿ ಬಿಡಲಾಗಿದೆ. ನಿಯಮ ಉಲ್ಲಂಘಿಸಿ ವ್ಯಾಪಾರಿ ಮಳಿಗೆ ತೆರೆದಿದ್ದ ಆರು ಅಂಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ 23 ಬೈಕ್ ಸವಾರರು ಹಾಗೂ ಮಂಗಳವಾರ 15 ಜನರಿಗೆ ದಂಡ ವಿಧಿಸಲಾಗಿದೆ. ಪಟ್ಟಣ ಸೇರಿ ತಾಲೂಕಾದ್ಯಂತ ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದು, ವಾಹನಗಳ ಓಡಾಟಕ್ಕೆ ಕಡಿವಾಣ ಹಾಕಲಾಗಿದೆ. ಅಂಗಡಿ, ಮುಂಗಟ್ಟು ಸೇರಿ ಬಹುತೇಕ ವ್ಯಾಪಾರಿ ಮಳಿಗೆಗಳಿಗೆ ಬೀಗ ಹಾಕಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಅನಗತ್ಯವಾಗಿ ಓಡಾಡುವ ಬೈಕ್‌ಗಳನ್ನು ವಶಕ್ಕೆ ಪಡೆದು, ಸವಾರರಿಗೆ ದಂಡ ವಿಧಿಸಲಾಗಿದೆ. ಮೆಡಿಕಲ್ ಸೇರಿ ಇತರೆ ಎಮರ್ಜನ್ಸಿ ವಾಹನಗಳಿಗೆ ಅವಕಾಶ ನೀಡಲಾಗಿದೆ. ಜನರಿಗೂ ಜನತಾ ಕರ್ಫ್ಯೂ ಬಗ್ಗೆ ಭಯವಿದ್ದು, ಬಹುತೇಕ ಜನರು ಮನೆಯಿಂದ ಹೊರಬರುತ್ತಿಲ್ಲ.
    | ಸಣ್ಣ ವೀರೇಶ ಗಬ್ಬೂರು ಪೊಲೀಸ್ ಠಾಣೆ ಪಿಎಸ್‌ಐ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts