More

    ಸಾರ್ವಜನಿಕ ಆಸ್ಪತ್ರೆ ಶೀಘ್ರ ಮೇಲ್ದರ್ಜೆಗೆ


    ಶಾಸಕ ಕೆ.ಶಿವನಗೌಡ ನಾಯಕ ಹೇಳಿಕೆ ಮಕ್ಕಳ ತೀವ್ರ ನಿಗಾ ಘಟಕ ಉದ್ಘಾಟನೆ

    ದೇವದುರ್ಗ: ತಾಲೂಕಿನ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆ ಆಸ್ಪತ್ರೆಯಾಗಿ ಶೀಘ್ರ ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ, ಸಾರ್ವಜನಿಕ ಆಸ್ಪತ್ರೆ ಹಾಗೂ ಶಿಲ್ಪಾ ಮೆಡಿಕೇರ್ ಲಿಮಿಟೆಡ್ ಹಾಗೂ ಶಿಲ್ಪಾ ಫೌಂಡೇಶನ್ ನೆರವಿನಿಂದ ನಿರ್ಮಿಸಲಾದ ಮಕ್ಕಳ ತೀವ್ರ ನಿಗಾ ಘಟಕ ಉದ್ಘಾಟಿಸಿ ಬುಧವಾರ ಮಾತನಾಡಿದರು. ತಾಲೂಕಿನಲ್ಲಿ ಆರೋಗ್ಯ ಸೇವೆ ಸುಧಾರಿಸಲು ಆದ್ಯತೆ ನೀಡಲಾಗಿದೆ. ಆಸ್ಪತ್ರೆ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಶೀಘ್ರದಲ್ಲಿ ಸೂಕ್ತ ಸ್ಥಳ ಗುರುತಿಸಿ ಸುಸಜ್ಜಿತ ಆಸ್ಪತ್ರೆ ಕಟ್ಟುವ ಚಿಂತನೆಯಿದೆ ಎಂದರು.

    ತಾಲೂಕಿನ ಜನರು ಎರಡು ಡೋಸ್ ಲಸಿಕೆ ಪಡೆದು ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾನಿಟೈಸರ್ ಬಳಸಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಕರೊನಾ 3ನೇ ಅಲೆ ಎದುರಿಸಲು ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿವೆ ಎಂದು ಶಿವನಗೌಡ ನಾಯಕ ತಿಳಿಸಿದರು.

    ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನು ಆರೋಗ್ಯ ಇಲಾಖೆಯಿಂದ ಸನ್ಮಾನಿಸಲಾಯಿತು. ಶಿಲ್ಪಾ ಮೆಡಿಕೇರ್ ಫೌಂಡೇಷನ್ ವ್ಯವಸ್ಥಾಪಕ ನಿರ್ದೇಶಕ ವಿಷ್ಣುಕಾಂತ್ ಭುತಾಡ್, ಡಿಎಚ್‌ಒ ರಾಮಕೃಷ್ಣ, ಟಿಎಚ್‌ಒ ಬನದೇಶ್ವರ, ವೈದ್ಯಾಧಿಕಾರಿ ಆರ್.ಎಸ್.ಹುಲಿಮನಿ, ಯಲ್ಲಪ್ಪ ಬೊಮ್ಮನಾಳ, ದೀಪಾ ಬಸವರಾಜ, ನಿಜಗುಣಯ್ಯಸ್ವಾಮಿ, ಸತೀಶ ಜಾಜಿ, ಶರಣಪ್ಪ ಸಾಹು, ಶರಣಗೌಡ ಗುಂಟ್ರಾಳ, ಯಲ್ಲಪ್ಪ ಇತರರಿದ್ದರು.

    ಸಾರ್ವಜನಿಕ ಆಸ್ಪತ್ರೆ ಶೀಘ್ರ ಮೇಲ್ದರ್ಜೆಗೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts