More

    ನಾರಾಯಣಪುರ ಬಲದಂಡೆ ನಾಲೆಗೆ ನೀರು ಹರಿಸಿ

    ದೇವದುರ್ಗ: ದೇವದುರ್ಗ, ಲಿಂಗಸುಗೂರು ತಾಲೂಕಿನ ರೈತರ ಅನುಕೂಲಕ್ಕಾಗಿ ನಾರಾಯಣಪುರ ಬಲದಂಡೆ ನಾಲೆಗೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್ ಹಾಗೂ ಚಿಕ್ಕಹೊನ್ನಕುಣಿಯ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಶುಕ್ರವಾರ ಪ್ರತ್ಯೇಕವಾಗಿ ಮನವಿ ಸಲ್ಲಿಸಿತು.

    ಎರಡು ತಾಲೂಕಿನ ರೈತರು ಜೂನ್‌ನಲ್ಲಿ ಬಿದ್ದ ಬೆಳೆಗೆ ಮುಂಗಾರು ಬೆಳೆಗಳನ್ನು ಬಿತ್ತನೆ ಮಾಡಿದ ಮೇಲೆ ಮಳೆ ಕೈಕೊಟ್ಟಿದ್ದರಿಂದ ಬೆಳೆಗಳು ಒಣಗಲಾರಂಭಿಸಿವೆ. ಇವುಗಳ ರಕ್ಷಣೆಗೆ ನೀರಿನ ಅತ್ಯಗತ್ಯವಿದ್ದು, ನಾಲೆಗೆ ಶೀಘ್ರವೇ ನೀರು ಹರಿಸದಿದ್ದರೆ ಮುಂಗಾರು ಬೆಳೆಗಳು ಹಾಳಾಗಲಿವೆ. ಇದರಿಂದ ರೈತರಿಗೆ ಭಾರಿ ನಷ್ಟವಾಗಲಿದೆ ಎಂದು ದೂರಿದೆ.

    ನಾರಾಯಣಪುರ ಬಲದಂಡೆ ನಾಲೆ ಆಧುನೀಕರಣ ಹಾಗೂ ಉಪಕಾಲುವೆಗಳ ನವೀಕರಣ ಕಾಮಗಾರಿ ಮಳೆಗಾಲ ಬಂದರೂ ಪೂರ್ಣಗೊಂಡಿಲ್ಲ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿರುವುದರಿಂದ ಕಾಮಗಾರಿ ವಿಳಂಬವಾಗಿದೆ. ಕೆಲವು ಕಡೆ ಅರೆಬರೆಯಾಗಿ ಕೆಲಸ ಮಾಡಲಾಗಿದೆ. ಇದರಿಂದ ರೈತರ ಜಮೀನಿಗೆ ನೀರು ತಲುಪುವುದು ಅನುಮಾನವಾಗಿದೆ ಎಂದು ಆರೋಪಿಸಿದೆ.

    ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ವಾರದಲ್ಲಿ ನೀರು ಬಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಎರಡೂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚಿಸಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ನಡೆಸುವುದಾಗಿ ಎಂದು ಎಚ್ಚರಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts