More

    ನಾರಾಯಣಪುರ ಡ್ಯಾಂನಿಂದ ನದಿಗೆ 8600 ಕ್ಯೂಸೆಕ್ ನೀರು ಬಿಡುಗಡೆ

    ದೇವದುರ್ಗ: ಕೃಷ್ಣಾ ಮೇಲ್ದಂಡೆ ಹಾಗೂ ಮಹಾರಾಷ್ಟ್ರದಲ್ಲಿ ಎರಡ್ಮೂರು ದಿನಗಳಿಂದ ಮಳೆ ಸುರಿಯುತ್ತಿರುವ ಕಾರಣ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಸೋಮವಾರ 8600 ಕ್ಯೂಸೆಕ್ ನೀರು ಹರಿಸಲಾಗಿದೆ.

    33 ಟಿಎಂಸಿ ಸಂಗ್ರಹ ಸಾಮರ್ಥ್ಯದ ನಾರಾಯಣಪುರದ ಬಸವ ಸಾಗರ ಜಲಾಶಯದಲ್ಲಿ 28.53 ಟಿಎಂಸಿ ನೀರಿನ ಸಂಗ್ರಹವಿದೆ. ಒಳಹರಿವು 4 ಸಾವಿರ ಕ್ಯೂಸೆಕ್ ಇದೆ. ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ನೀರು ಬಿಟ್ಟಿರುವ ಕಾರಣ ಸೋಮವಾರ ಮಧ್ಯಾಹ್ನ ಎರಡು ಕ್ರಸ್ಟ್‌ಗೇಟ್‌ಗಳ ಮೂಲಕ 8600 ಕ್ಯೂಸೆಕ್ ನೀರು ಹರಿಸಲಾಗಿದೆ. ಈ ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

    123 ಟಿಎಂಸಿ ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ 83.85 ಟಿಎಂಸಿ ನೀರಿನ ಸಂಗ್ರಹವಿದೆ. 81,910 ಕ್ಯೂಸೆಕ್ ಒಳಹರಿವು ಇದ್ದು, ಕೃಷ್ಣಾ ನದಿಗೆ 2500 ಕ್ಯೂಸೆಕ್ ನೀರು ಬಿಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts