More

    ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಿ

    ದೇವದುರ್ಗ: ಶಿಕ್ಷಣದಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯವಿದ್ದು, ಪಾಲಕರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ನೀಡುವ ಮೂಲಕ ಅಕ್ಷರವಂತರಾಗಿ ಮಾಡಬೇಕು ಎಂದು ಎಸಿಡಿಪಿಒ ನಾಗರತ್ನಾ ಸಲಹೆ ನೀಡಿದರು.

    ತಾಲೂಕಿನ ಮಲ್ಲಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ, ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಯಿ, ಬಾಣಂತಿ, ಗರ್ಭಿಣಿಯರು ಹಾಗೂ ಮಕ್ಕಳಲ್ಲಿ ಕಂಡುಬರುವ ಕಡಿಮೆ ತೂಕ ಹಾಗೂ ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಶಿಸ್ತು, ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿದ್ದು, ಈ ನಿಟ್ಟಿನಲ್ಲಿ ಮಹಿಳೆಯರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದರು.

    ಪಿಡಿಒ ಸಿ.ಬಿ.ಪಾಟೀಲ್ ಮಾತನಾಡಿ, ಗ್ರಾಪಂ ಸದಸ್ಯರ ಸಹಕಾರದೊಂದಿಗೆ ಕ್ಯಾದಿಗೇರಾ, ಮುಷ್ಟೂರು ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡುತ್ತಿರುವುದು ಉತ್ತಮ ಕಾರ್ಯ. ಸಮವಸ್ತ್ರ ಮಕ್ಕಳಲ್ಲಿ ಶಿಸ್ತನ್ನು ಬೆಳೆಸುತ್ತದೆ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಭವಿಷ್ಯ ರೂಪಿಸುವ ಕಲಾಕಾರರು. ಹೀಗಾಗಿ ಕಾರ್ಯಕರ್ತೆಯರು ಉತ್ತಮವಾಗಿ ಕೆಲಸ ಮಾಡಬೇಕು ಎಂದರು.

    ಕ್ಯಾದಿಗೇರಾ ಗ್ರಾಪಂ ಅಧ್ಯಕ್ಷೆ ಪದ್ಮಾಶ್ರೀ ಕಿಷ್ಟಪ್ಪ ಪೊಪಾ, ಮೇಲ್ವಿಚಾರಕಿ ಶಿವಲಕ್ಷ್ಮೀ, ಶರಣಮ್ಮ ರಾಠೋಡ್, ಗ್ರಾಪಂ ಸದಸ್ಯೆ ನೀಲಮ್ಮ ರಾಠೋಡ್, ರಾಜಶೇಖರ ರಾಠೋಡ್, ಚನ್ನಪ್ಪ, ಗಂಗಮ್ಮ, ಲಕ್ಷ್ಮೀ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts