More

    ಮಾರಣಾಂತಿಕವಾಗಿ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ ಸರ್ಕಾರಿ ನೌಕರರ ಸಂಘ

    ದೇವದುರ್ಗ: ಬಳ್ಳಾರಿ ಜಿಲ್ಲೆಯ ತೋಳಮಾಮಿಡಿ ಗ್ರಾಮದಲ್ಲಿ ನಡೆಯುತ್ತಿರುವ ಮರಳು ಅಕ್ರಮ ಗಣಿಗಾರಿಕೆ ತಡೆಯಲು ತೆರಳಿದ್ದ ಕಂದಾಯ ಅಧಿಕಾರಿ ವೆಂಕಟಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಖಂಡಿಸಿ ಪಟ್ಟಣದ ಮಿನಿವಿಧಾನಸೌಧ ಮುಂದೆ ಕರ್ನಾಟಕ ಸರ್ಕಾರಿ ನೌಕರರ ಸಂಘ ಶನಿವಾರ ಪ್ರತಿಭಟನೆ ನಡೆಸಿತು.

    ಬಳ್ಳಾರಿಯಲ್ಲಿ ಮರಳು ಅಕ್ರಮ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಕಂದಾಯ ಅಧಿಕಾರಿ ವೆಂಕಟಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದಾಗ ದಂಧೆಕೋರರು ಮರಳು ಅಕ್ರಮವಾಗಿ ಸಾಗಿಸುತ್ತಿದ್ದರು. ಪ್ರಶ್ನಿಸಿದ ಕಂದಾಯ ಅಧಿಕಾರಿ ಮೇಲೆ ದಂಧೆಕೋರರು ಜಗಳವಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಲ್ಲದೆ 10-15 ಜನರ ಗುಂಡಾಗಳ ಗುಂಪು ಅಧಿಕಾರಿ ಮನೆಗೆ ತೆರಳಿ ಅವರ ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ. ಇದರಿಂದ ಅಧಿಕಾರಿಗಳು ನಿರ್ಭಯವಾಗಿ ಕೆಲಸ ಮಾಡದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

    ಕಂದಾಯ ಅಧಿಕಾರಿ ವೆಂಕಟಸ್ವಾಮಿ ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಹಲ್ಲೆ ನಡೆಸುವ ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಬೇಕು. ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಇಂಥ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಶ್ರೀನಿವಾಸ್ ಚಾಪಲ್‌ಗೆ ಮನವಿ ಸಲ್ಲಿಸಿದರು.

    ಅಧ್ಯಕ್ಷ ಹನುಮಂತ್ರಾಯ ಶಾಖೆ, ಶಿವಲಿಂಗಯ್ಯ, ಬಸವರಾಜ, ಭೀಮರಾಯ ಮೇಟಿ, ಮಹಾದೇವ ಪಾಟೀಲ್, ಲಕ್ಷ್ಮಣ, ಉಮೇಶ, ಸೋಮಶೇಖರ, ಭೀಮರಾಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts