More

    ಸಾರ್ವಜನಿಕರಿಗೆ ಉಪಟಳ ಕೊಡುತ್ತಿದ್ದ ಮಂಗ ಸೆರೆ ಹಿಡಿದ ಅರಣ್ಯ ಇಲಾಖೆ

    ದೇವದುರ್ಗ: ತಾಲೂಕಿನ ಮಸರಕಲ್ ಗ್ರಾಮದಲ್ಲಿ ಸಾರ್ವಜನಿಕರು, ಮಕ್ಕಳು ಹಾಗೂ ಸಾಕು ಪ್ರಾಣಿಗಳಿಗೆ ತೊಂದರೆ ನೀಡುತ್ತಿದ ಯಾದಗಿರಿ (ಕೋತಿ ತಳಿ) ಮಂಗವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಿಡಿಯುವಲ್ಲಿ ಸೋಮವಾರ ಯಶಸ್ವಿಯಾಗಿದ್ದಾರೆ.

    ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಲೆ ಹಾಕಿ ಹಿಡಿದು ಕೋತಿಗೆ ತೊಂದರೆ ಆಗದಂತೆ ವಾಹನದಲ್ಲಿ ದಟ್ಟ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರಲಾಯಿತು ಎಂದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಮಹ್ಮದ್ ಅಲ್ಲಹುದ್ದಿನ್ ತಿಳಿಸಿದರು.

    ಗ್ರಾಮದಲ್ಲಿ ಹಲವು ದಿನಗಳಿಂದ ಈ ಕೋತಿಯ ಹಾವಳಿ ಹೆಚ್ಚಾಗಿತ್ತು. ಸಾರ್ವಜನಿಕರು, ಮಹಿಳೆಯರು, ಮಕ್ಕಳಿಗೆ ತೊಂದರೆ ನೀಡುವ ಜತೆಗೆ, ಹಲವು ನಾಯಿ ಮರಿಗಳು, ಕೋಳಿ, ಕುರಿ, ಆಡು ಮರಿಗಳನ್ನು ಕೊಂದಿದೆ. ಇದರಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದರು. ನಿತ್ಯ ಮಂಗನಿಂದ ತೊಂದರೆ ಎದುರಿಸುತ್ತಿದ್ದ ಮಸರಕಲ್ ಗ್ರಾಮಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts