More

    ಒಂಭತ್ತು ತಿಂಗಳ ಬಾಕಿ ವೇತನ ಪಾವತಿಸಿ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಒತ್ತಾಯ

    ದೇವದುರ್ಗ: ತಾಲೂಕಿನ ಪರಿಶಿಷ್ಟ ಜಾತಿ ಹಾಸ್ಟೆಲ್‌ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರ 9 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಹಸೀಲ್ದಾರ್ ಕೆ.ವೈ.ಬಿದರಿಗೆ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು (ಸಿಐಟಿಯು ಸಂಯೋಜಿತ) ಮಂಗಳವಾರ ಮನವಿ ಸಲ್ಲಿಸಿದರು.

    ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಇಲಾಖೆಯಿಂದ ನಡೆಯುತ್ತಿರುವ ಮೆಟ್ರಿಕ್ ನಂತರ, ಮೆಟ್ರಿಕ್ ಪೂರ್ವ ಹಾಗೂ ಆಶ್ರಯ ವಸತಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿ, ಸಹಾಯಕರು, ಜವಾನರಾಗಿ ದುಡಿಯುತ್ತಿದ್ದು, ಸಮರ್ಪಕ ವೇತನ ಇಲ್ಲದೆ ಸಮಸ್ಯೆ ಎದುರಿಸುವಂತಾಗಿದೆ.

    ಕಳೆದ 9ತಿಂಗಳಿಂದ ವೇತನ ನೀಡದಿದ್ದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಸಂಬಳ ನೀಡುವಂತೆ ಹಲವು ಸಲ ಸಂಬಂಧಿಸಿದ ವಾರ್ಡನ್, ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.

    ಇದನ್ನೂ ಓದಿ: ವಸತಿ ನಿಲಯ ಕಾರ್ಮಿಕರಿಗೆ ಬಾಕಿ ವೇತನ ಪಾವತಿಸಿ

    ಕೂಡಲೇ ಬಾಕಿ ಇರುವ ನೌಕರರ 9ತಿಂಗಳ ವೇತನ ತಕ್ಷಣ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು 5ನೇ ತಾರೀಕಿನೊಳಗೆ ವೇತನ ನೀಡಬೇಕು. ಹಾಸ್ಟೆಲ್ ನೌಕರರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು. ಕನಿಷ್ಠ ವೇತನ ನೀಡಿ ಜೀವನ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

    ಸಿಐಟಿಯು ತಾಲೂಕು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ, ನೌಕರರ ಸಂಘದ ಅಧ್ಯಕ್ಷೆ ರೇಣುಕಾ, ಮೀನಾಕ್ಷಿ, ಫಾತಿಮಾ, ಲಕ್ಷ್ಮೀ, ಮರಿಯಪ್ಪ, ತಾಯಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts