More

    ಸ್ತ್ರೀಯರಿಗೆ ಕಾನೂನಿನ ಉಚಿತ ನೆರವು ಲಭ್ಯ

    ದೇವದುರ್ಗ: ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಸಾಕಷ್ಟು ಕಾನೂನುಗಳನ್ನು ರೂಪಿಸಲಾಗಿದೆ. ಆದರೂ ಮಹಿಳೆಯರ ಮೇಲೆ ದೌರ್ಜನ್ಯ ನಿಂತಿಲ್ಲ. ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಉಚಿತ ನ್ಯಾಯ ಪಡೆಯಲು ಅವಕಾಶವಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ನಾಗೇಶಮೂರ್ತಿ ಹೇಳಿದರು.

    ಪಟ್ಟಣದ ಬಾಬು ಜಗಜೀವನರಾಮ್ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಕಾನೂನಿನ ಬಲ ಅಗತ್ಯವಿದೆ. ಕಾನೂನು ಅರಿವಿನ ಮೂಲಕ ಮಹಿಳೆಯರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ, ಕೌಟುಂಬಿಕ ಕಿರುಕುಳವನ್ನು ತಡೆಗಟ್ಟಲು ಸಾಧ್ಯ ಎಂದರು.

    ಬಡವರು ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರೆ, ಉಚಿತ ಕಾನೂನು ನೆರವು ನೀಡುವ ಜತೆಗೆ ನ್ಯಾಯಾಲಯದಲ್ಲಿ ಪರಿಹಾರ ಕೇಳಿ ದಾವೆ ಹಾಕಲು ವಕೀಲರನ್ನು ನೇಮಿಸಲಾಗುವುದು. ಮಹಿಳೆಯರು ಇದರ ಸದ್ಬಳಕೆ ಮಾಡಬೇಕು ಎಂದು ನ್ಯಾಯಾಧೀಶ ನಾಗೇಶಮೂರ್ತಿತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts