More

    ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ

    ದೇವದುರ್ಗ: ಶಿಕ್ಷಣದಿಂದ ಸಮಾಜ ಸಂಘಟನೆ, ದೇಶದ ಅಭಿವೃದ್ಧಿ ಸಾಧ್ಯ ಎಂದು ಶ್ರೀನಾರಾಯಣಗುರು ಟ್ರಸ್ಟ್ ಅಧ್ಯಕ್ಷ ಹುಸೇನಯ್ಯ ಅಬಕಾರಿ ಹೇಳಿದರು.

    ತಾಲೂಕಿನ ದೇವತಗಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀನಾರಾಯಣಗುರು ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್, ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

    ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಸುಧಾರಣೆಗೆ ಸರ್ಕಾರ ವಿವಿಧ ಯೋಜನೆ ಜಾರಿಗೊಳಿಸಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸಿದರೆ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ನೀಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಟ್ರಸ್ಟ್‌ನಿಂದ ದೇವತಗಲ್, ಊಟಿ, ಪಲಕನಮರಡಿ ಪ್ರೌಢಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ ಮಾಡಲಾಗಿದೆ. ಪಾಲಕರು ಒಂದು ಹೊತ್ತಿನ ಊಟ ಬಿಟ್ಟಾದರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

    ಉಪನ್ಯಾಸಕ ಆಂಜನೇಯ ಅಬಕಾರಿ ಮಾತನಾಡಿ, ಸರ್ಕಾರಿ ಶಾಲೆ ಅಭಿವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ನಾನಾ ಯೋಜನೆ ಜಾರಿಗೊಳಿಸಿದೆ. ಪಾಲಕರು ಅವುಗಳ ಲಾಭಪಡೆದು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದರು. ಟ್ರಸ್ಟ್ ಸದಸ್ಯ ಜಿ.ರಮೇಶ, ಎಸ್‌ಡಿಎಂಸಿ ಅಧ್ಯಕ್ಷ ಶಿವರಾಜ ದೇವತಗಲ್ ಹಾಗೂ ಶಿಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts