More

    ಪರೀಕ್ಷೆ ಲೋಪವಾಗದಂತೆ ನೋಡಿಕೊಳ್ಳಲು ಶಾಸಕ ಕೆ.ಶಿವನಗೌಡ ನಾಯಕ ಸೂಚನೆ

    ದೇವದುರ್ಗ: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ತುಂಬಾ ಕಾಳಜಿ ವಹಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತಿದೆ. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಕೆ.ಶಿವನಗೌಡ ನಾಯಕ ಸೂಚಿಸಿದರು.

    ಪಟ್ಟಣದ ಡಾನ್ ಬೋಸ್ಕೋ ಶಿಕ್ಷಣ ಸಂಸ್ಥೆಯಲ್ಲಿ ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು. ಪರೀಕ್ಷೆ ಸುಗಮವಾಗಿ ನಡೆಸಲು ಎಲ್ಲ ಇಲಾಖೆ ಸಹಕಾರ ಅಗತ್ಯ. ವಿವಿಧ ಇಲಾಖೆಗಳಿಗೆ ನೀಡಿದ ಜವಾಬ್ದಾರಿಯನ್ನು ಅಧಿಕಾರಿಗಳು ಪಾಲಿಸಲೇಬೇಕು. ಪರೀಕ್ಷೆ ಸಮಯದಲ್ಲಿ ಯಾವುದೇ ಲೋಪ ಕಂಡುಬಂದರೂ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

    ಬಿಇಒ ಡಾ.ಆರ್.ಇಂದಿರಾ ಮಾತನಾಡಿ, ಜು.19 ಮತ್ತು 22 ರಂದು ಪರೀಕ್ಷೆ ನಡೆಯಲಿದೆ. ತಾಲೂಕಿನಲ್ಲಿ 26 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. 3764 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಪ್ರತಿಕೇಂದ್ರದಲ್ಲಿ 100 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು. ತಾಲೂಕು ಆರೋಗ್ಯ ವೈದ್ಯಾಧಿಕಾರಿ ಬನದೇಶ್ವರ ಮಾತನಾಡಿ, ಥರ್ಮಲ್ ಸ್ಕ್ಯಾನಿಂಗ್, ಸಾನಿಟೈಸರ್, ಮಾಸ್ಕ್ ವ್ಯವಸ್ಥೆ ಮಾಡಲಾಗುವುದು. ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡುತ್ತೇವೆ ಎಂದರು. ಡಿಪೋ ಮ್ಯಾನೇಜರ್ ಸಿದ್ದಪ್ಪ ಮಾತನಾಡಿ, ಪರೀಕ್ಷಾ ಕೇಂದ್ರಕ್ಕೆ ಮಕ್ಕಳ ತಲುಪಿಸಲು ವಿಶೇಷ ಬಸ್ ಬಿಡಲಾಗುವುದು ಎಂದರು.

    ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್ ಚಾಪಲ್, ಸಿಪಿಐ ಆರ್.ಎಂ.ನದಾಫ್, ತಾಪಂ ಇಒ ಪಂಪಾಪತಿ ಹಿರೇಮಠ, ಜಿಪಂ ಮಾಜಿ ಸದಸ್ಯ ಪ್ರಕಾಶ್ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts