ಸುಭಾಶ್ಚಂದ್ರ ಬೋಸ್ ಅಪ್ರತಿಮ ಹೋರಾಟಗಾರ

blank

ದೇವದುರ್ಗ: ಸ್ವಾತಂತ್ರೃ ಸೇನಾನಿ ಸುಭಾಶ್ಚಂದ್ರ ಬೋಸ್ ಅಪ್ರತಿಮ ಸ್ವಾತಂತ್ರೃ ಹೋರಾಟಗಾರರಾಗಿದ್ದು, ದೇಶಕ್ಕೆ ಸ್ವಾತಂತ್ರೃ ಕೊಡಿಸುವ ಜತೆಗೆ ದೇಶ ಯಾವ ಪಥದಲ್ಲಿ ಸಾಗಬೇಕೆನ್ನುವ ಸ್ಪಷ್ಟ ಚಿಂತನೆ ಅವರಲ್ಲಿತ್ತು ಎಂದು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹೇಳಿದರು.

blank

ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ನೇತಾಜಿ ಸುಭಾಶ್ಚಂದ್ರ ಬೋಸ್ 125ನೇ ಜನ್ಮ ದಿನಾಚರಣೆ ಹಾಗೂ ವಿಚಾರ ಸಂಕಿರಣದಲ್ಲಿ ಮಾತನಾಡಿ, ಇಂದು ಶಿಕ್ಷಣ ವ್ಯವಸ್ಥೆಯಲ್ಲಿ ಕಾಣುತ್ತಿರುವ ಬಿಕ್ಕಟ್ಟುಗಳನ್ನು ಎದುರಿಸಲು ವಿದ್ಯಾರ್ಥಿಗಳು ನೇತಾಜಿ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ನೇತಾಜಿ ರಾಜೀರಹಿತ ಹೋರಾಟ ದೇಶದ ಪ್ರತಿಯೊಬ್ಬ ಯುವಕರಿಗೂ ಪ್ರೇರಣೆ. ಯುವಪೀಳಿಗೆ ದೇಶದ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಡಲು ಸಂಘಟಿತರಾಗಬೇಕಿದೆ. ಯುವಕರಿಂದಲೇ ದೇಶದ ಅಭಿವೃದ್ಧಿ ಸಾಧ್ಯ. ಈ ದೃಷ್ಟಿಯಿಂದ ನೇತಾಜಿ ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪಿಸಿದ್ದರು. ಸದೃಢ ಸಮಾಜ ನಿರ್ಮಿಸಲು ಯುವಜನತೆ ನೇತಾಜಿ ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಪ್ರಭಾರ ಮುಖ್ಯಶಿಕ್ಷಕ ಯಲ್ಲನಗೌಡ, ಶಿಕ್ಷಕರಾದ ಸತೀಶ, ಮೆಹಕಾ, ಕಾರ್ಯದರ್ಶಿ ಪೀರ್‌ಸಾಬ್ ಇದ್ದರು.

Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank