More

    ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲು ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶರಣಮ್ಮ ಸಲಹೆ

    ದೇವದುರ್ಗ: ಪ್ರತಿಯೊಬ್ಬ ಗರ್ಭಿಣಿ, ಬಾಣಂತಿ, ತಾಯಂದಿರು ಹಾಗೂ ಮಕ್ಕಳು ಪೌಷ್ಟಿಕ ಆಹಾರ ಸೇವಿಸಬೇಕು. ಇದರಿಂದ ಉತ್ತಮ ಆರೋಗ್ಯ ಪಡೆಯುವ ಜತೆಗೆ ಅಪೌಷ್ಟಿಕತೆ ದೂರಮಾಡಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಮದುರ್ಗ ವಲಯದ ಮೇಲ್ವಿಚಾರಕಿ ಶರಣಮ್ಮ ಹೇಳಿದರು.

    ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಇಲಾಖೆ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಹಾಗೂ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

    ತಾಲೂಕಿನ ಮಹಿಳೆಯರು ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಮಹಾಮಾರಿಯಂತೆ ಕಾಡುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಮಹಿಳೆಯರು ಮುಂದಾಗಬೇಕು. ಅಪೌಷ್ಟಿಕತೆಯಿಂದ ತಾಯಿ, ಮಗುವಿನ ಸಾವು ಸಂಭವಿಸುವ ಸಾಧ್ಯತೆಯಿದೆ. ಇದರ ನಿವಾರಣೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದರಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನವೂ ಒಂದಾಗಿದೆ. ಆದ್ದರಿಂದ ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರದ ಸಮುದಾಯ ಅಧಿಕಾರಿ ಪ್ರಶಾಂತ ಮಾತನಾಡಿ, ತಾಲೂಕಿನಲ್ಲಿ ಕಂಡು ಬರುವ ಅಪೌಷ್ಟಿಕತೆ ನಿವಾರಣೆ ಆರೋಗ್ಯ ಇಲಾಖೆ ನೀಡುವ ಸಲಹೆ ಸೂಚನೆಗಳನ್ನು ನೀಡಿದ್ದು, ಇವುಗಳನ್ನು ತಪ್ಪದೆ ಪಾಲಿಸಬೇಕು. ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು ಎಂದರು.

    ಆರೋಗ್ಯ ಇಲಾಖೆ ಸಿಬ್ಬಂದಿ ಕಲಾವತಿ, ಗ್ರಾಪಂ ಕಾರ್ಯದರ್ಶಿ ಬಸಯ್ಯಸ್ವಾಮಿ, ಶಿಕ್ಷಕಿ ಸುಜಾತಾ ಹೆಬ್ಬಾಳ್, ಗ್ರಾಪಂ ಸದಸ್ಯ ರಂಗಪ್ಪ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶೈಜಾದಿ ಬೇಗಂ, ಅಂಗನವಾಡಿ ಕಾರ್ಯಕರ್ತೆರಾದ ನಿರ್ಮಲಾ, ದುರುಗಪ್ಪ, ಶಾರದಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts