ದೇವನಹಳ್ಳಿ ಹೋರಾಟ; ರೈತರ ಪರವಾಗಿ ಧ್ವನಿ ಎತ್ತಿದ ನಟಿ ರಮ್ಯಾ| farmer-protest

Ramya
Published on

farmer-protest ; ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನಲ್ಲಿ ಭೂ ಸ್ವಾಧೀನದ ವಿರುದ್ದ ಕಳೆದ 1,185 ದಿನಗಳಿಂದ ನಿರಂತರ ಹೋರಾಟ ಮಾಡಿಕೊಂಡು ಬಂದಿರುವ ದೇವನಹಳ್ಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಮೋಹಕತಾರೆ ನಟಿ ರಮ್ಯಾ ಕೈಜೋಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಮ್ಯಾ ಪೋಸ್ಟ್​ ಮಾಡಿದ್ದು, ರೈತರ ಹೋರಾಟದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಳ್ಳುವ ಮೂಲಕ ಕರ್ನಾಟಕ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಬಗ್ಗೆ ಸ್ವಲ್ಪ ಕರುಣೆ ತೋರಿಸಿ ಅವರಿಗೆ ಒಳ್ಳೆಯದನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದಿದ್ದಾರೆ. ಇದು ಕೇವಲ ಕರ್ನಾಟಕದ ರೈತರ ಕಥೆಯಲ್ಲ. ದೇಶದಾದ್ಯಂತ ಎಲ್ಲಾ ಕಡೆಯು ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಕೈಗಾರಿಕೆಗಳು ಉದ್ಯೋಗಗಳನ್ನು ಸೃಷ್ಟಿಸುವಾಗ ರೈತರ ಜೀವನೋಪಾಯವನ್ನೂ ಕಾಪಾಡಿಕೊಳ್ಳಬೇಕಿದೆ ಎಂದು ರಮ್ಯಾ ಹೇಳಿದ್ದಾರೆ.

ಏನಿದು ರೈತ ಹೋರಾಟ?

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಫಲವತ್ತಾದ 1777 ಎಕರೆ ಕೃಷಿ ಭೂಮಿಯನ್ನು ಬಲವಂತವಾಗಿ ಕಿತ್ತುಕೊಂಡು ಸರ್ಕಾರವು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ಕಳೆದ 1180ಕ್ಕೂ ಹೆಚ್ಚು ದಿನಗಳಿಂದ 13 ಗ್ರಾಮಗಳ ರೈತರು ಹೋರಾಟ ನಡೆಸುತ್ತಿದ್ದಾರೆ.

(ಏಜೆನ್ಸೀಸ್)

ಇಂದು (02) ಎರಡು ಪ್ರಮುಖ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು, ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿಯ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅದೇ ರೀತಿ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ 'ಭೂಮಿ ಸತ್ಯಾಗ್ರಹ'ದಲ್ಲಿ ಖ್ಯಾತ ನಟ ಪ್ರಕಾಶ್ ರೈ ಸೇರಿದಂತೆ ನಾಡಿನ ಅನೇಕ ಕಲಾವಿದರು, ರಂಗಕರ್ಮಿಗಳು ಉಪವಾಸ ನಿರತ ರೈತರನ್ನು ಬೆಂಬಲಿಸಿ ಬೆಂಬಲ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net