ಮೈತ್ರಿ ಅಭ್ಯರ್ಥಿ ಸುನೀತಾ ಗೆಲುವು ಖಚಿತ

ದೇವರಹಿಪ್ಪರಗಿ: ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ನೇತೃತ್ವದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.
ಗುರುವಾರ ಪಟ್ಟಣದ ಪ್ರಮುಖ ಬೀದಿಗಳು ಹಾಗೂ ವಿವಿಧ ಬಡಾವಣೆಯ ಮನೆ ಮನೆಗೆ ತೆರಳಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

ನೂರಾರು ಸಂಖ್ಯೆಯಲ್ಲಿದ್ದ ಮುಖಂಡರು, ಕಾರ್ಯಕರ್ತರು ಮೈತ್ರಿ ಪಕ್ಷಗಳ ಪರ ಘೋಷಣೆ ಕೂಗಿದರಲ್ಲದೆ, ಭಿತ್ರಿ ಪತ್ರಗಳನ್ನು ಹಂಚಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಮಾತನಾಡಿ, ಜಿಲ್ಲೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಜೆಡಿಎಸ್ ಕಾಂಗ್ರೆಸ್ ಮೆತ್ರಿ ಅಭ್ಯರ್ಥಿ ಜಯಶಾಲಿಯಾಗಲಿದ್ದಾರೆ. ಬಿಜೆಪಿಯ ಪೊಳ್ಳು ಭರವಸೆಗಳಿಗೆ ಜನ ಬೇಸತ್ತಿದ್ದಾರೆ. ಕೇಂದ್ರ ಸರ್ಕಾರ 2014ರ ಚುನಾವಣೆಯಲ್ಲಿ ಹೇಳಿದ ಒಂದೂ ಭರವಸೆ ಈಡೇರಿಸಿಲ್ಲ. ಕೇವಲ ಜನರನ್ನು ಯಾಮಾರಿಸಿ ಯುವ ಜನಾಂಗವನ್ನು ದಾರಿ ತಪ್ಪಿಸುತ್ತಿದ್ದಾರೆ. ಯುವಕರು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದು ಬಿಜೆಪಿಗೆ ಶಪಿಸುವಂತಾಗಿದೆ. ನಮ್ಮ ಮೈತ್ರಿ ಸರ್ಕಾರ ಜನಪರ ಕಾಳಜಿ ಹೊಂದಿದ್ದು, ಜನಸಮಾನ್ಯರ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತಿದೆ. ದೀನ ದಲಿತ, ಬಡವರ ಪರವಾದ ನಮ್ಮ ಕುಮಾರಣ್ಣನವರ ಆಡಳಿತ ಸುಬಧ್ರ ಕರ್ನಾಟಕಕ್ಕೆ ಸಾಕ್ಷಿಯಾಗಿದೆ. ಅಭಿವೃದ್ಧಿಯಾಗಲು ಮೈತ್ರಿ ಪಕ್ಷದ ಅಭ್ಯರ್ಥಿ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ, ದೇವರಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗನಗೌಡ ಪಾಟೀಲ, ಜೆಡಿಎಸ್ ಮುಖಂಡ ರಾಜುಗೌಡ ಪಾಟೀಲ, ಕಾಸುಗೌಡ ಬಿರಾದಾರ, ಶಂಕರಗೌಡ ಜಿರ್ಲಿ, ಕಾಸು ಕುದರಿ, ಕಲ್ಲನಗೌಡ ಪಾಟೀಲ, ಮಲ್ಲು ಜಮಾದಾರ, ಹಾಜಿ ಮಸಳಿ, ಉಮೇಶ ರೂಗಿ, ಅಯಾಜ ಯಲಗಾರ, ಮುರ್ತುಜ ತಾಂಬೋಳಿ ಸೇರಿ ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಪಾಲ್ಗೊಂಡಿದ್ದರು.

ಜೆಡಿಎಸ್ ಅಧ್ಯಕ್ಷ ರಿಯಾಜ್ ಯಲಗಾರ, ಕಾಂಗ್ರೆಸ್ ಯುವ ಮುಖಂಡ ಬಶೀರಶೇಠ ಬೇಪಾರಿ ನೇತೃತ್ವ ವಹಿಸಿದ್ದರು. ಪಟ್ಟಣದ ತುಂಬ ರೋಡ್ ಶೋ ನಡೆಸಿ ಮತಯಾಚಿಸಿದರು.