

ಆಂಧ್ರಪ್ರದೇಶ: ಟಾಲಿವುಡ್ನ ಸ್ಟಾರ್ ನಟ, ಆರ್ಆರ್ಆರ್ ಖ್ಯಾತಿಯ ಜೂ. ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ದೇವರ' ಬಗ್ಗೆ ಇದೀಗ ಹೊಸ ಹೊಸ ಅಪ್ಡೇಟ್ಗಳು ಲಭಿಸುತ್ತಿದ್ದು, ಚಿತ್ರದ ರಿಲೀಸ್ಗಾಗಿ ಸಿನಿಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಇದೀಗ ಟೀಸರ್ ಸುದ್ದಿಯೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಕ್ರಾಂತಿಗೆ ಬಿಡುಗಡೆಯಾಗುತ್ತಿರುವ ಚಿತ್ರದಲ್ಲಿ ಟೀಸರ್ ಅನಾವರಣಗೊಳ್ಳಲಿದೆ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.
ಕೊರಟಾಲ ಶಿವ ನಿರ್ದೇಶಿಸಿರುವ 'ದೇವರ' ಟಾಲಿವುಡ್ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದು, ಚಿತ್ರದ ಟೀಸರ್ ತೇಜ ಸಜ್ಜ ನಟನೆಯ 'ಹನುಮಾನ್' ಸಿನಿಮಾದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಜನವರಿ 12 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿರುವ ಈ ಚಿತ್ರದ ಪ್ರಾರಂಭದಲ್ಲಿ ಜೂ. ಎನ್ಟಿಆರ್ ಅಭಿನಯದ ದೇವರ ಟೀಸರ್ ಅನಾವರಣಗೊಳ್ಳಲಿದೆ.
ಪ್ರಶಾಂತ್ ವರ್ಮಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ 'ಹನು-ಮಾನ್' ಕೂಡ ಬಿಡುಗಡೆಗೂ ಮುನ್ನವೇ ಸಿಕ್ಕಾಪಟ್ಟೆ ಸದ್ದು ಮಾಡಿದ್ದು, ಪೋಸ್ಟರ್, ಟ್ರೇಲರ್ ಮುಖೇನ ಚಿತ್ರರಸಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರದಲ್ಲಿ ತೇಜ ಸಜ್ಜ, ವಿನಯ್ ರೈ ಮುಖ್ಯಭೂಮಿಕೆಯಲ್ಲಿದ್ದಾರೆ.
'ದೇವರ' ಚಿತ್ರದಲ್ಲಿ ಜೂ. ಎನ್ಟಿಆರ್ಗೆ ನಾಯಕಿಯಾಗಿ ಜಾನ್ವಿ ಕಪೂರ್ ಕಾಣಿಸಿಕೊಂಡಿದ್ದು, ಸೈಫ್ ಅಲಿ ಖಾನ್, ಪ್ರಕಾಶ್ ರಾಜ್, ಶ್ರೀಕಾಂತ್, ಮುರುಳಿ ಶರ್ಮಾ ಮುಂತಾದವರ ತಾರಾಗಣವಿದೆ. ಚಿತ್ರಕ್ಕೆ ಅನಿರುದ್ಧ್ ಸಂಗೀತ ಸಂಯೋಜಿಸಿದ್ದಾರೆ,(ಏಜೆನ್ಸೀಸ್).