More

    ದೇವರಾಜ ಅರಸು ಪ್ರಶಸ್ತಿ ವಿತರಣೆಗೆ ಗ್ರಹಣ, ಸಿಎಂ ವಿರುದ್ಧ ಸಿದ್ದರಾಮಯ್ಯ ಗರಂ

    ಬೆಂಗಳೂರು: ನಾಡುಕಂಡ ಧೀಮಂತ ಆಡಳಿತಗಾರ, ಬಡವರು ಹಾಗೂ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಅಪರೂಪದ ಜನನಾಯಕ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 105ನೇ ಜನ್ಮದಿನದ ಸಂಭ್ರಮ ಇಂದು. ಈ ದಿನವೇ ಸಿಎಂ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

    ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ರಾಜ್ಯದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತ್ರಿ ಯಡಿಯೂರಪ್ಪಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ? ಎಂದು ಟ್ವಿಟರ್​ ಮೂಲಕ ಪ್ರಶ್ನಿಸಿದ್ದಾರೆ.

    ಇದನ್ನೂ ಓದಿರಿ ಕರಡಿ ಕಣ್ಣೀರಿಗೆ ಕರಗಿದ ರೈತರು!

    ಇಷ್ಟಕ್ಕೆ ಸುಮ್ಮನಾಗದ ಸಿದ್ದರಾಮಯ್ಯ, ಡಿ.ದೇವರಾಜ ಅರಸು ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ‌ಮಾಡಿ ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

    ಆರೋಪಿ ನವೀನ್​ನನ್ನು ಗಲಭೆಕೋರರಿಂದ ಬಚಾವ್​ ಮಾಡಿದ್ದೇ ಅಖಂಡ ಶ್ರೀನಿವಾಸ ಮೂರ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts