More

    ಕ್ಷಯದ ಬಗ್ಗೆ ಭಯ ಬೇಡ, ಅರಿವು ಮುಖ್ಯ, ಟಿಎಚ್‌ಒ ಡಾ.ಬನದೇಶ್ವರ ಹೇಳಿಕೆ

    ದೇವದುರ್ಗ: ಕ್ಷಯ ವಾಸಿಯಾಗುವ ಕಾಯಿಲೆಯಾಗಿದ್ದು ರೋಗಿಗಳು ಹಾಗೂ ಸಾರ್ವಜನಿಕರಿಗೆ ಭಯಪಡಿಸದೆ ಅರಿವು ಮೂಡಿಸಬೇಕು ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಬನದೇಶ್ವರ ಹೇಳಿದರು.

    ಪಟ್ಟಣದ ಅಬು ಮೊಹಲ್ಲಾ ಏರಿಯಾದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಕಚೇರಿಯಿಂದ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ ನೀಡಿ ಮಂಗಳವಾರ ಮಾತನಾಡಿದರು. ಜು.17ರಿಂದ ಆ.2ರವರೆಗೆ ತಾಲೂಕಿನಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ನಡೆಯಲಿದೆ ಎಂದು ತಿಳಿಸಿದರು.

    ಆಯ್ದ ಗ್ರಾಮಗಳಲ್ಲಿ ಸರ್ವೇ ಕಾರ್ಯ ನಡೆಯುತ್ತಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆ ಭೇಟಿ ನೀಡುತ್ತಿದ್ದಾರೆ. ಅವರು ಬಂದ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ. ಕ್ಷಯರೋಗ ಲಕ್ಷಣಗಳು ಕಂಡುಬಂದರೆ ಮಾಹಿತಿ ನೀಡಿ ರೋಗ ನಿರ್ಮೂಲನೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಮನವಿ ಮಾಡಿದರು.

    ಇದನ್ನೂ ಓದಿ: 51 ಕ್ಷಯ ರೋಗಿಗಳ ದತ್ತು, ಪ್ರಶಂಸೆ

    ಡಾ.ನಿರ್ಮಲಾ ಮಾತನಾಡಿದರು. ಕ್ಷಯ ಮೇಲ್ವಿಚಾರಕ ರವಿ ಶುಕ್ಲಾ, ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಹಿರಿಯ ಮೇಲ್ವಿಚಾರಕ ಚನ್ನಬಸಯ್ಯ, ಭಿಮೇಶಪ್ಪ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ನೇತ್ರಾ, ಯಲ್ಲಮ್ಮ, ಆಶಾ ಕಾರ್ಯಕರ್ತೆಯರಾದ ಮಹ್ಮದಿ, ರೇಖಾ, ನಾಗಮ್ಮ, ತಾಯಮ್ಮ, ಶಾಂತಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಶಂಶಾದ್, ಶಾಂತಮ್ಮ, ಪದ್ಮಾವತಿ, ಬಾಲಮ್ಮ, ಸಾಬಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts