More

    ದಿಢೀರ್​ ಹೊರನಡೆದ ಅಶ್ವಿನ್; ಬದಲಿ ಆಟಗಾರನಾಗಿ ಮತ್ತೋರ್ವ ಕನ್ನಡಿಗ ಆಯ್ಕೆ

    ರಾಜ್​ಕೋಟ್​: ಇಲ್ಲಿನ ನಿರಂಜನ್​ ಷಾ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಮೂರನೇ ಟೆಸ್ಟ್​ ಪಂದ್ಯದಲ್ಲಿ ಆರ್​. ಅಶ್ವಿನ್​ ಜಾಗಕ್ಕೆ ಬದಲಿ ಆಟಗಾರನನ್ನು ನೇಮಿಸಲಾಗಿದ್ದು, ಕರ್ನಾಟಕ ಮೂಲದ ಆಟಗಾರ ರಾಷ್ಟ್ರೀಯ ತಂಡದ ಪರ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ.

    ವೈಯಕ್ತಿಕ ಕಾರಣಗಳಿಂದಾಗಿ ಟೀಂ ಇಂಡಿಯಾದ ಸ್ಪಿನ್ನರ್​ ಆರ್​. ಅಶ್ವಿನ್​ ಟೆಸ್ಟ್​ ಸರಣಿಯಿಂದ ದಿಢೀರ್​ ಎಂದು ಹಿಂದೆ ಸರಿದ ಕಾರಣ ಅವರ ಜಾಗಕ್ಕೆ ಬದಲಿ ಆಟಗಾರನನ್ನು ನೇಮಿಸಲಾಗಿದೆ. ಅಶ್ವಿನ್​ ಅವರ ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ದಿಢೀರ್ ತಂಡವನ್ನು ತೊರೆದಿದ್ದಾರೆ ಎಂದು ತಿಳಿದು ಬಂದಿದೆ.

    ಆರ್​. ಅಶ್ವಿನ್ ಬದಲಿಗೆ ಸಬ್ಸ್​ಟ್ಯೂಟ್ ಫೀಲ್ಡರ್ ಆಗಿ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದಾರೆ. ವಿಶೇಷ ಎಂದರೆ ಪಡಿಕ್ಕಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಕಣಕ್ಕಿಳಿಯುತ್ತಿರುವುದು ಇದೇ ಮೊದಲ ಬಾರಿಗೆ. ಈ ಹಿಂದೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಪಡಿಕ್ಕಲ್ ಇದೀಗ ರೆಡ್ ಬಾಲ್ ಕ್ರಿಕೆಟ್​ನಲ್ಲೂ ಕಣಕ್ಕಿಳಿದಿದ್ದಾರೆ.

    Devdutt Padikkal

    ಇದನ್ನೂ ಓದಿ: ಅಬಕಾರಿ ನೀತಿ ಹಗರಣ; ಕೊನೆಗೂ ನ್ಯಾಯಾಲಯಕ್ಕೆ ಹಾಜರಾದ ಕೇಜ್ರಿವಾಲ್

    ದೇವದತ್ ಪಡಿಕ್ಕಲ್ ಮೂರನೇ ಟೆಸ್ಟ್ ಪಂದ್ಯಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಬದಲಿಗೆ ಪಡಿಕ್ಕಲ್​ಗೆ ಸ್ಥಾನ ನೀಡಲಾಗಿದೆ. ಅದರಂತೆ ಇದೀಗ ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಫೀಲ್ಡಿಂಗ್ ಮಾಡಲು ಪಡಿಕ್ಕಲ್ ಕಣಕ್ಕಿಳಿದಿದ್ದಾರೆ.

    ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್​ಗೆ ಬ್ಯಾಟಿಂಗ್ ಅಥವಾ ಬೌಲಿಂಗ್ ಮಾಡಲು ಅವಕಾಶ ಇರುವುದಿಲ್ಲ. ಏಕೆಂದರೆ ಐಸಿಸಿ ನಿಯಮದ ಪ್ರಕಾರ ಕೋವಿಡ್ ಕಾರಣ ಅಥವಾ ಗಾಯದ ಕಾರಣ ಆಟಗಾರನೊಬ್ಬ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದರೆ ಮಾತ್ರ ಬದಲಿ ಆಟಗಾರ ತಂಡದ ಪರ ಆಡಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts