More

    ದೇವೇಗೌಡರೇನು ತಮ್ಮ ಸಿದ್ಧಾಂತ ಬದಲಿಸಿದ್ದಾರಾ?: ಡಿಕೆಶಿ ಪ್ರಶ್ನೆ

    ಬೆಂಗಳೂರು: ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರ ಜಂಟಿ ಸುದ್ದಿಗೋಷ್ಠಿ ನಡೆಸಿರುವ ಕುರಿತು ಉ‌ಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಅದು ಅವರಿಗೆ ಬಿಟ್ಟ ವಿಚಾರ. ಆ ಬಗ್ಗೆ ನಾವು ಮಾತನಾಡುವುದಿಲ್ಲ. ಆದರೆ, ಜಾತ್ಯತೀತತೆ ವಿಚಾರವಾಗಿ ದೇವೇಗೌಡರು ತಮ್ಮ ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ. ದೇವೇಗೌಡರೇನು ತಮ್ಮ ಸಿದ್ಧಾಂತ ಬದಲಿಸಿದ್ದಾರಾ? ಎಂದು ಡಿಕೆಶಿ ವ್ಯಂಗ್ಯವಾಡಿದರು.

    ಜೆಡಿಎಸ್‌ನ ಸಿದ್ಧಾಂತ, ಮೈತ್ರಿ ವಿಚಾರವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಮಾತನಾಡಲಿ ಎಂದರು.

    ಅಧಿವೇಶನಕ್ಕೆ ಬಿಜೆಪಿ ಗೈರಾದ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಗೆ ಸದನವನ್ನು ಎದುರಿಸುವ ಧೈರ್ಯವಿರಲಿಲ್ಲ. ಧೈರ್ಯ ಇದ್ದಿದ್ದರೆ ಸದನದ ಚರ್ಚೆಯಲ್ಲಿ ಭಾಗವಹಿಸುತ್ತಿದ್ದರು. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿರುವುದನ್ನು ಕಂಡು ಬಿಜೆಪಿ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಹೀಗಾಗಿ ಅನಗತ್ಯ ವಿಚಾರವಾಗಿ ಗದ್ದಲ ಮಾಡಿದ್ದಾರೆ ಎಂದರು.

    ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕತ್ವದ ಮಹತ್ವ ಗೊತ್ತಿಲ್ಲ. ಇದು ಸಂವಿಧಾನಿಕ ಹುದ್ದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಬಜೆಟ್ ಅಧಿವೇಶನ ಹಾಗೂ ರಾಜ್ಯಪಾಲರ ಭಾಷಣ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯಲ್ಲಿ ನಡೆದಿದೆ. ರಾಜಕೀಯವಾಗಿ ತಮ್ಮ ಅಸ್ತಿತ್ವ ತೋರಿಸಲು ಧರಣಿಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

    ತಮಿಳುನಾಡು ಸಚಿವರು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದು ಕರ್ನಾಟಕದಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, ‘ಕರ್ನಾಟಕದಲ್ಲಿ ಈ ಬಾರಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಆದರೂ ಇರುವ ನೀರಿನಲ್ಲೇ ಹರಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸಬಹುದು. ಈ ತೀರ್ಮಾನ ಕಾವೇರಿ ಪ್ರಾಧಿಕಾರದ ಬಳಿ ಇದ್ದು, ನಾವು ಅದರ ತೀರ್ಮಾನ ಗೌರವಿಸುತ್ತೇವೆ ಎಂದರು.

    ಕಾವೇರಿ ಪ್ರಾಧಿಕಾರದವರು ಕುಡಿಯುವ ನೀರಿನ ಅಗತ್ಯ ಗಮನದಲ್ಲಿಟ್ಟುಕೊಂಡು ನೀರು ಬಿಡಬೇಕಾಗುತ್ತದೆ. ಇಂದು, ನಾಳೆ ಮಳೆ ಬೀಳುವ ನಿರೀಕ್ಷೆ ಇದೆ. ಕಳೆದೆರಡು ವರ್ಷಗಳ ಕಾಲ ಉತ್ತಮ ಮಳೆಯಾಗಿತ್ತು’ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts