More

    ಮುಸ್ಲಿಂ ಧರ್ಮದಲ್ಲಿ ಹುಟ್ಟುವ ಆಸೆಯಿದೆ ಎಂದಿದ್ದ ದೇವೇಗೌಡರು ಈಗ ಏನು ಹೇಳ್ತಾರೆ? ಸಿದ್ದರಾಮಯ್ಯ ಪ್ರಶ್ನೆ

    ಬೆಂಗಳೂರು: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎನ್ನುತ್ತಿದ್ದ ಎಚ್‌ಡಿ ದೇವೇಗೌಡರು ಈಗ ಏನು ಹೇಳ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಇದನ್ನೂ ಓದಿ:ಬಿಜೆಪಿ-RSS ಎಷ್ಟೇ ದ್ವೇಷ ಹರಡಿದರೂ ಭಾರತೀಯರ DNAಯಲ್ಲೇ ಪ್ರೀತಿ ತುಂಬಿದೆ: ರಾಹುಲ್ ಗಾಂಧಿ

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ರಾಜ್ಯದ ರೈತ ಸಂಘ ಸಂಸ್ಥೆಗಳ ಸುಮಾರು 218 ಮಂದಿ ಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

    ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಈಗ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ಜೊತೆ ಸೇರಿದ್ದಾರೆ. ಅದಕ್ಕೆ ಎಲ್ಲಾವನ್ನು ಸರಿ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದ ದೇವೇಗೌಡರು ಈಗೇನು ಹೇಳುತ್ತಿದ್ದಾರೆ. ಮಾಜಿ ಪ್ರಧಾನಿಗಳಾಗಿದ್ದವರು, ರಾಜ್ಯದ ಪರ ಮಾತನಾಡಬೇಕು, ಈ ರೀತಿ ಹೇಳಿಕೆ ನೀಡಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮುಂದಿನ ಜನ್ಮದಲ್ಲಿ ಎಚ್.​ಡಿ. ದೇವೇಗೌಡರಿಗೆ ಮುಸಲ್ಮಾನ ಧರ್ಮದಲ್ಲಿ ಹುಟ್ಟುವ ಆಸೆಯಿದೆ ಎಂದು ಹಾಸನ ಸಂಸದ ಹಾಗೂ ಎಚ್​.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್​ ರೇವಣ್ಣ ಹೇಳಿದ್ದರು. ಕೋಲಾರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಈ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಮತ್ತು ದೇವೇಗೌಡ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದ ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ ಕೇಂದ್ರ ಸರ್ಕಾರದವರು ಅನುಮತಿ ನೀಡದೇ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದಾರೆ. ಅವರು ರಾಜ್ಯ ಬಿಜೆಪಿ ನಾಯಕರ ಜೊತೆ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿದರು. ಮೈತ್ರಿ ಧರ್ಮ ಪಾಲಿಸುವಂತೆ ನಾಯಕರಿಗೆ ಸೂಚನೆ ನೀಡಿದ್ದಾರೆ. ಬರ ಪರಿಹಾರ ಮತ್ತು ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಹಂಚಿಕೆ ತಾರತಮ್ಯ ಕುರಿತು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್​ ನಾಯಕರ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts