More

    ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಮಾಜಿ ಸಚಿವ ಎಚ್​.ಡಿ. ರೇವಣ್ಣ; ವಿಷಯ ಏನು ಅಂದ್ರೆ…

    ನವದೆಹಲಿ: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ಬೆನ್ನಿಗೇ ಅವರು ಮಾತ್ರವಲ್ಲದೆ ಸಚಿವ ಸ್ಥಾನಾಕಾಂಕ್ಷಿಗಳ ದೆಹಲಿ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಇದೀಗ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹಾಗೂ ಮಾಜಿ ಸಚಿವ ಎಚ್​.ಡಿ. ರೇವಣ್ಣ ಕೂಡ ದೆಹಲಿಗೆ ತೆರಳಿದ್ದು, ಅಲ್ಲಿ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡಿದ್ದಾರೆ.

    ಅರ್ಥಾತ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಚಿವ ಎಚ್​.ಡಿ. ರೇವಣ್ಣ ಇಬ್ಬರೂ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಇಂದು ಭೇಟಿಯಾಗಿದ್ದಾರೆ. ಅಷ್ಟಕ್ಕೂ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿರುವುದು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ.

    ಹಾಸನ ಜಿಲ್ಲೆಯಲ್ಲಿ ಹಾದುಹೋಗುವ ಚನ್ನರಾಯಪಟ್ಟಣ- ಹೊಳೆನರಸೀಪುರ- ಅರಕಲಗೂಡು- ಮಡಿಕೇರಿ- ಮಾರ್ಕೋಟ – ಕೇರಳ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ ನಾಲ್ಕು ಪಥದ ರಸ್ತೆಗೆ ಅನುಮೋದನೆ ನೀಡುವಂತೆ ಅವರಿಬ್ಬರು ಮನವಿ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ

    ಜಿಲ್ಲೆಯ ಮತ್ತೊಂದು ರಾಷ್ಟ್ರೀಯ ಹೆದ್ದಾರಿ ಹೊಳೆನರಸೀಪುರ ತಾಲ್ಲೂಕಿನ ಯಡಗೋಡನಹಳ್ಳಿ ಬಿಳಿಕೆರೆ ಮತ್ತು ಹಾಸನ ಬೇಲೂರು ಎರಡು ಪಥದ ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿಯಾಗಿ ಟೆಂಡರ್ ಕರೆಯಲು ಅನುಮೋದನೆ ನೀಡುವಂತೆ ಕೂಡ ಮನವಿ ಮಾಡಿಕೊಂಡಿದ್ದು, ಅದಕ್ಕೆ ನಿತಿನ್​ ಗಡ್ಕರಿ ಸಕಾರಾತ್ಮಕವಾಗಿ ಸ್ಪಂದಿಸಿ, ಟೆಂಡರ್ ಕರೆಯಲು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ತುರ್ತಾಗಿ ಕರೊನಾ ಲಸಿಕೆ ತೆಗೆದುಕೊಳ್ಳುವುದು ಅನಿವಾರ್ಯ..

    ಪೊಲೀಸರಿನ್ನು ಕ್ರಿಮಿನಲ್‌ಗಳ ಜತೆ ಪಾರ್ಟಿಗೆ ಹಾಜರಾಗುವಂತಿಲ್ಲ; ರೌಡಿ-ಗೂಂಡಾಗಳ ಸಮಾರಂಭಗಳಲ್ಲಿ ಭಾಗಿ ಆಗುವಂತಿಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts