ದೇವೇಗೌಡರ ಅತ್ತೆ ಕಾಳಮ್ಮ ನಿಧನ

ಹಾಸನ : ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಅತ್ತೆ ಕಾಳಮ್ಮ (100) ಗುರವಾರ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ.

ಚೆನ್ನಮ್ಮ ದೇವೇಗೌಡರ ತಾಯಿ ಕಾಳಮ್ಮ ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಆಸ್ಪತ್ರೆ ಸೇರಿದ್ದರು. ನಂತರ ಹಾಸನದ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದರು ಎನ್ನಲಾಗಿದೆ.

ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರಿಯಳ್ಳಿಯಲ್ಲಿ ಕಾಳಮ್ಮ ಅಂತ್ಯಕ್ರಿಯೆ ನಡೆಯಲಿದ್ದು, ದೇವೇಗೌಡರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *