ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ (ಎಪಿಎಂಸಿ) ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತೀವ್ರವಾಗಿ ವಿರೋಧಿಸಿದ್ದಾರೆ.
ಮಧ್ಯವರ್ತಿಗಳ ಕಪಿಮುಷ್ಟಿಯಿಂದ ಎಪಿಎಂಸಿ ಕಾಯ್ದೆಯು ರೈತರಿಗೆ ತಕ್ಕಮಟ್ಟಿನ ರಕ್ಷಣೆ ನೀಡಿತ್ತು. ಆದರೆ ಎಪಿಎಂಸಿಯ ತಿದ್ದುಪಡಿ ಕಾಯ್ದೆ ಜಾರಿಯಾದರೆ ಬಂಡವಾಳಶಾಹಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಂದ ರೈತರು ಶೋಷಣೆಗೊಳಗಾಗುವ ಅಪಾಯವಿದೆ’’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿರಿ ಈದ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ: ಇಬ್ರಾಹಿಂ V/s ಈಶ್ವರಪ್ಪ
‘‘ರಾಜ್ಯ ಸರ್ಕಾರ ಈ ರೀತಿ ಏಕಾಏಕಿ ತೀರ್ಮಾನ ಕೈಗೊಂಡರೆ ರೈತರು ಸಂಕಷ್ಟಕ್ಕೀಡಾಗುತ್ತಾರೆ. ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಯ ಮೂಲಕ ದುರ್ಬಲಗೊಳಿಸಿದರೆ ರೈತರು ಶೋಷಣೆಗೊಳಗಾದಾಗ ಯಾವುದೇ ರಕ್ಷಣೆ ನೀಡಲು ಸರ್ಕಾರಕ್ಕೂ ಸಾಧ್ಯವಾಗುವುದಿಲ್ಲ’’ ಎಂದು ಎಚ್ಚರಿಸಿದ್ದಾರೆ.
ರೈತ ಸಂಘಟನೆಗಳು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಎಪಿಎಂಸಿ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.
ಇದನ್ನೂ ಓದಿರಿ ವಿವಾದಾತ್ಮಕ ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಅಸ್ತು