More

    ಸ್ಪರ್ಧಾ ಮನೋಭಾವ ರೂಢಿಸಿಕೊಳ್ಳಿ

    ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ರೂಢಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಕಿರುತೆರೆ ಕಲಾವಿದೆ ಹಾಗೂ ಆಂಗ್ಲ ಭಾಷಾ ಪ್ರಾಧ್ಯಾಪಕಿ ಅಕ್ಷತಾ ಗಣೇಶ್ ಹೇಳಿದರು.

    ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಾಂಸ್ಕೃತಿಕ, ಸಾಹಿತ್ಯಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ನಮ್ಮೆಲ್ಲರ ಬದುಕಿನಲ್ಲಿ ದಿನನಿತ್ಯ ಎದುರಿಸುವ ಎಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ಸಮಸ್ಯೆಗಳ ಮೂಲವನ್ನು ಸ್ಥಿತಪ್ರಜ್ಞೆಯಿಂದ ಪರಿಹರಿಸಿಕೊಂಡು ಸುಂದರ ಬದುಕನ್ನು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.

    ಕೆನರಾ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಮಾತನಾಡಿ, ನಮ್ಮ ಜೀವನಕ್ಕೆ ಕ್ರೀಡೆ ಬಹಳ ಮುಖ್ಯ. ಇಂದಿನ ಯುವಪೀಳಿಗೆ ಬಹಳಷ್ಟು ಕ್ರೀಡೆಗಳನ್ನು ಮೊಬೈಲ್ ಫೋನಿನಲ್ಲೇ ಆಡುತ್ತಾರೆ. ಯುವ ಮನಸ್ಸುಗಳು ಕ್ರೀಡಾಂಗಣಕ್ಕೆ ಪ್ರವೇಶಿಸಿ, ಸತತ ಪರಿಶ್ರಮದಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಿ ಎಂದರು.

    ಇದೇ ವೇಳೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ದತ್ತಿ ಪುರಸ್ಕಾರ ನೀಡಲಾಯಿತು. ಪ್ರಾಂಶುಪಾಲರಾದ ಡಾ.ಎಂ. ಪೂರ್ಣಿಮಾ, ಶೈಕ್ಷಣಿಕ ಡೀನ್ ಡಾ. ರೇಚಣ್ಣ, ವೇದಿಕೆ ಸಂಚಾಲಕಿ ಎಂ.ಕೆ. ಉಷಾರಾಣಿ, ಎ. ರಶ್ಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts