ಬೀಳಗಿ: ವಿದ್ಯಾರ್ಥಿಗಳನ್ನು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿ ಅವರಲ್ಲಿ ಕ್ರಿಯಾಶೀಲತೆ ಬೆಳೆಸುವುದು ಅವಶ್ಯವಾಗಿದೆ ಎಂದು ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಸ್ಥಳೀಯ ಕೊರ್ತಿ ಆರ್‌ಸಿ ಸಮೀಪದ ಜ್ಞಾನದೀಪ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಶಾಲಾ ಮಕ್ಕಳ ವಾರ್ಷಿಕ ಸೇಹ ಸಮ್ಮೇಳನ ಹಾಗೂ ಜ್ಞಾನ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲಿ ನೀಡುವ ಶಿಕ್ಷಣದ ಸಂಸ್ಕಾರವೇ ಅವರ ಮುಂದಿನ ಭವಿಷ್ಯವನ್ನು ರೂಪಿಸುತ್ತದೆ ಎಂದರು.
ಮಡಿಕೇಶ್ವರ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಬಸವರಾಜ ಹಂಚಲಿ ಮಾತನಾಡಿ, ಮಕ್ಕಳ ಚಲನವಲನ ಬಗ್ಗೆ ಪಾಲಕರು ನಿಗಾವಹಿಸಬೇಕು. ಪಾಲಕರು, ಶಿಕ್ಷಕರು ಮಕ್ಕಳಿಗೆ ಮಾದರಿಯಾಗಿರಬೇಕು. ಶಿಕ್ಷಣ ಜೊತೆಗೆ ಸಂಸ್ಕಾರವನ್ನು ಕಲಿಸುವ ಜವಾಬ್ದಾರಿ ಶಿಕ್ಷಕರ ಜತೆಗೆ ಪಾಲಕರದ್ದು ಇದೆ ಎಂದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವೆಂಕಪ್ಪ ಸುಗತೇಕರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜ್ಞಾನದೀಪ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ದೇವರಮನಿ ಅಧ್ಯಕ್ಷತೆ ವಹಿಸಿದ್ದರು. ಸಂದೇಶ ಶಿರೂಳ ಅವರಿಗೆ ಜ್ಞಾನಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸರಸ್ವತಿ ಸಿದ್ದಪ್ಪ ದೇವರಮನಿ, ಜ್ಞಾನದೀಪ ಕಮ್ಯುನಿಟಿ ಡೆವಲಪ್‌ಮೆಂಟ್ ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ಪಪಂ ಸದಸ್ಯ ರಾಜು ಬೋರ್ಜಿ, ಶ್ರೀಶೈಲ ಅಂಟಿನ, ನೇಮರಾಜ ದೇಸಾಯಿ, ಪತ್ರಕರ್ತ ಕಿರಣ ಬಾಳಾಗೋಳ, ನಾಗರಾಳ ಸರ್ಕಾರಿ ಪೌಢಶಾಲೆ ಶಿಕ್ಷಕ ಜಿ.ಆರ್.ಹವೇಲಿ, ಲಕ್ಷ್ಮಣ ನಾಯಕ, ಗ್ರಾಪಂ ಅಧ್ಯಕ್ಷೆ ಶೋಭಾ ತಳವಾರ, ಮುಖ್ಯಶಿಕ್ಷಕಿ ಡಾ. ವಿದ್ಯಾ ಹಂಚಾಟೆ ಮತ್ತಿತರರಿದ್ದರು.