More

    ಮಕ್ಕಳಲ್ಲಿ ಮನುಷ್ಯತ್ವ ಬೆಳೆಸಿ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಇಂದಿನ ದಿನಗಳಲ್ಲಿ ಮಕ್ಕಳನ್ನು ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ ಎಂದು ಪ್ರಾಧ್ಯಾಪಕಿ ವಿನಯಾ ಒಕ್ಕುಂದ ಹೇಳಿದರು.
    ನಗರದ ಕರ್ನಾಟಕ ವಿದ್ಯಾವರ್ಧಕ ಸಂದಲ್ಲಿ ಚಿಲಿಪಿಲಿ ಮಕ್ಕಳ ಶಿಣ ಹಾಗೂ ಸರ್ವಾಂಗೀಣ ಅಭಿವೃದ್ಧಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಚಿಲಿಪಿಲಿ ಕಲರವ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಚಿಲಿಪಿಲಿ ಮಕ್ಕಳ ಪ್ರತಿಭೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
    ಮಕ್ಕಳ ಮೇಲೆ ಸಾಕಷ್ಟು ಒತ್ತಡವಿರುವುದನ್ನು ಪಾಲಕರು ಅರ್ಥ ಮಾಡಿಕೊಳ್ಳಬೇಕು. ಮಕ್ಕಳಿಗೆ ಯೋಚನೆ ಮಾಡುವ ಅವಕಾಶವೇ ಇಲ್ಲದಾಗಿದೆ. ಪ್ರಸ್ತುತ ದಿನಗಳಲ್ಲಿ ಮಕ್ಕಳು ವಿಚಾರ ಮಾಡುವ ಶಕ್ತಿ ಕಳೆದುಕೊಂಡಿದ್ದಾರೆ. ಮನುಷ್ಯರನ್ನು ಮನುಷ್ಯರನ್ನಾಗಿ ನೋಡುವುದನ್ನೇ ಬಿಡುವಂತಹ ರೋಗಗ್ರಸ್ತ ಸಮಾಜದಲ್ಲಿ ನಾವಿದ್ದೇವೆ. ಇಂತಹ ಕಾಲ ಟ್ಟದಲ್ಲಿ ನಮ್ಮ ಮಕ್ಕಳಲ್ಲಿ ಒಟ್ಟಿಗೆ ಬಾಳುವ, ಸಹ ಬಾಳ್ವೆಯಿಂದ ನಡೆದುಕೊಳ್ಳುವ ಗುಣ ಕಟ್ಟಿಕೊಡಬೇಕಾಗಿದೆ ಎಂದರು.
    ಮಕ್ಕಳಲ್ಲಿ ಮನುಷ್ಯತ್ವ ಬೆಳೆಸುವ ನಿಟ್ಟಿನಲ್ಲಿ ಕುಟುಂಬ ಮತ್ತು ಶಾಲೆಗಳು ಹಿಮ್ಮುಖವಾಗಿವೆ. ಇದರ ಪರಿಣಾಮ ಇಂದು ಸಮಾಜದಲ್ಲಿ ಯುವಕರ ಮನಸ್ಥಿತಿ ನೋಡುತ್ತೇವೆ. ಅತ್ಯಂತ ಬುದ್ಧಿವಂತ ಮಕ್ಕಳು ಇದ್ದರೂ ಅವರಲ್ಲಿ ಮನುಷ್ಯತ್ವ ಗುಣ ಇರುವುದಿಲ್ಲ. ಮನುಷ್ಯತ್ವ, ಭಾವನಾತ್ಮಕ, ಸಹಬಾಳ್ವೆ ಪರಿಕಲ್ಪನೆಯನ್ನು ಮಕ್ಕಳ ಶಿಬಿರಗಳು ಕಟ್ಟಿಕೊಡುತ್ತಿರುವುದು ಅಭಿನಂದನೀಯ. ಇದೇ ಕಾರಣಕ್ಕೆ ಶಿಬಿರಗಳು ಮುಖ್ಯವಾಗಿವೆ ಎಂದರು.
    ಯಲ್ಲಪ್ಪ ಬೆಂಡಿಗೇರಿ, ಶಿಲ್ಪಾರಾಣಿ ಚೆಲ್ಲೂರ, ಆಕಾಶ ಹುಬ್ಬಳ್ಳಿ ಮಾತನಾಡಿದರು. ಚಿಲಿಪಿಲಿ ಸಂಸ್ಥೆ ಅಧ್ಯಕ್ಷ ಶಂಕರ ಹಲಗತ್ತಿ ಅಧ್ಯಕ್ಷತೆ ವಹಿಸಿದ್ದರು.
    ಕೆ.ಎಚ್​. ನಾಯಕ, ಡಾ. ಬಾಳಪ್ಪಾ ಚಿನಗುಡಿ, ಸಿಕಂದರ ದಂಡಿನ, ಸೋಮು ಕಾರಿಗನೂರು, ಭಾಸ್ಕರ ಪುಟ್ಟಣ್ಣ, ಪ್ರಮೀಳಾ ಜಕ್ಕಣ್ಣವರ, ಶೃತಿ ಹುರುಳಿಕೊಪ್ಪ, ಮಲ್ಲನಗೌಡ ಪಾಟೀಲ, ಡಾ. ಅಲ್ಲಾಭ ಮಕಾನದಾರ, ನೇತ್ರಾ ಪವಾರ, ಮಂಜುನಾಥ ಬಡಿಗೇರ, ರೇಷ್ಮಾ ತಹಸೀಲ್ದಾರ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts