More

    ಗಣಿತ ವಿಷಯದಲ್ಲಿ ಆಸಕ್ತಿ ಬೆಳೆಸಿ

    ಧಾರವಾಡ: ಗಣಿತ ವಿಷಯ ಕಬ್ಬಿನದ ಕಡಲೆಯಲ್ಲ. ಮಕ್ಕಳಲ್ಲಿ ಗಣಿತದ ಬಗ್ಗೆ ಆಸಕ್ತಿ ಬೆಳೆಸಬೇಕು. ಕಲಿಸುವ ವಿಧಾನವನ್ನು ಆಟ ಪಾಠಗಳೊಡನೆ ಮಿಶ್ರಣ ಮಾಡಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾಡುವ ವಿನೂತನ ಕಾರ್ಯಕ್ರಮವನ್ನು ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ಮಾಡುತ್ತಿದೆ ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
    ನಗರದ ವಿದ್ಯಾಗಿರಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಆರ್ಯಭಟ ಗಣಿತ ಸಂಶೋಧನಾ ಕೇಂದ್ರವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
    ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಮಾತನಾಡಿ, ವಿದ್ಯಾರ್ಥಿಗಳಿಗೆ ಗಣಿತ ವಿಷಯವನ್ನು ಆಟವಾಡುತ್ತ ಕಲಿಯುವಂತಹ ವಾತಾವರಣ ನಿರ್ಮಿಸುವ ಸಲುವಾಗಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಗಣಿತ ವಿಷಯಗಳಿಗೆ ಸಂಬAಽಸಿದ ಮಾಡೆಲ್‌ಗಳು ಹಾಗೂ ಇಂಟರ್‌ಆ್ಯಕ್ಟಿವ್ ಬೋರ್ಡ್ ಮುಖಾಂತರ ವಿದ್ಯಾರ್ಥಿಗಳಿಗೆ ಗಣಿತ ಭೋಧನೆ ಮಾಡಲಾಗುತ್ತದೆ ಎಂದರು.
    ಸAಸ್ಥೆಯ ಕಾರ್ಯದರ್ಶಿ ಜೀವಂಧರಕುಮಾರ, ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ವೀರಣ್ಣ ಬೋಳಿಶೆಟ್ಟಿ, ಜೆಎಸ್‌ಎಸ್ ಆಡಳಿತ ಮಂಡಳಿಯ ಉಪಾಧÀ್ಯಕ್ಷ ಮೋಹನ ತಾವರಗೇರಿ, ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಶಾಲೆಯ ಪ್ರಾಚಾರ್ಯೆ ಉಷಾ ಸಂತೋಷ್, ಸಹ ಸಂಯೋಜಕರಾದ ನಿರ್ಮಲ ಪಾಟೀಲ, ಸಾವಿತ್ರಿ ಗತಾಡೆ, ಕಮಲಾಕ್ಷಿ ಸಣ್ಣಕ್ಕಿ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts