ಅಗತ್ಯಕ್ಕೆ ತಕ್ಕಂತೆ ಕೌಶಲ್ಯತೆ ಬೆಳೆಸಿಕೊಳ್ಳಿ

blm
Published on

ಕಾರ್ಕಳ: ಇಂದಿನ ದಿನಗಳಲ್ಲಿ ಅಗತ್ಯತೆಗೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯತೆ ಬೆಳೆಸಿಕೊಂಡು ಉದ್ಯೋಗಾವಕಾಶ ಹೆಚ್ಚಿಸಿಕೊಳ್ಳಬೇಕು. ನಿಟ್ಟೆ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಈ ದೃಷ್ಟಿಯಲ್ಲಿ ಸಜ್ಜುಗೊಳಿಸಲು ಸದಾ ಕಾರ್ಯಪ್ರವೃತ್ತವಾಗಿರುತ್ತದೆ. ತಾಂತ್ರಿಕ ಶಿಕ್ಷಣದೊಂದಿಗೆ ದೈಹಿಕ ಆರೋಗ್ಯ ಹಾಗೂ ವಾನಸಿಕ ನೆಮ್ಮದಿ ವೃದ್ಧಿಯ ಹಿನ್ನಲೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಷಯಗಳಿಗೂ ಸವಾನ ಮಹತ್ವ ನೀಡುವುದು ಮುಖ್ಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಹೇಳಿದರು.

ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ನಡೆದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆದ ನೂತನ ಬ್ಯಾಚ್‌ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪ್ರೋಚಾನ್ಸಲರ್ ಡಾ.ಶಾಂತರಾಮ್ ಶೆಟ್ಟಿ ವಾತನಾಡಿ, ವಿದ್ಯಾರ್ಥಿಗಳು ತಮ್ಮ ಸರ್ವತೋಮುಖ ಅಭಿವೃದ್ಧಿಗೆ ಏನೆಲ್ಲಾ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ಇಷ್ಟಪಟ್ಟು ವಾಡುವ ಕೆಲಸ ಯಾವತ್ತೂ ಕಷ್ಟಕರವೆನಿಸುವುದಿಲ್ಲ ಎಂದರು.

ವೈಸ್‌ಚಾನ್ಸಲರ್ ಡಾ.ಎಂ.ಎಸ್.ಮೂಡಿತ್ತಾಯ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಪ್ರೋ.ಡಾಣ ಗೋಪಾಲ್ ಮುಗೇರಾಯ ಮತ್ತಿತರರು ಉಪಸ್ಥಿತರಿದ್ದರು.

ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಸ್ವಾಗತಿಸಿದರು. ಪ್ರಥಮ ವರ್ಷ ಬಿಟೆಕ್ ವಿದ್ಯಾರ್ಥಿಗಳ ಸಂಯೋಜಕ ಹಾಗೂ ಸ್ಟೂಡೆಂಟ್ ಇಂಡಕ್ಷನ್ ಕಾರ್ಯಕ್ರಮದ ಸಂಯೋಜಕ ಡಾಣ ಜಾಯ್ ವಾರ್ಟಿಸ್ ವಂದಿಸಿದರು. ಮೆಕ್ಯಾನಿಕಲ್ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗ್ರ್ತ್ಯೈನಲ್ ಡಿಮೆಲ್ಲೋ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net