ವಿಕಸಿತ ಕೃಷಿ ಸಂಕಲ್ಪ ಅಭಿಯಾನ

agri land
Published on

ಲಕ್ಷ್ಮೇಶ್ವರ: ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಜೂನ್ 12ರವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರವು ಕೃಷಿ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ.

ಅಭಿಯಾನದಲ್ಲಿ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಗುತ್ತಿದೆ. ಮುಂಗಾರು ಬೆಳೆಗಳಾದ ಹೆಸರು, ಶೇಂಗಾ, ಸೂರ್ಯಕಾಂತಿ, ಗೋವಿನ ಜೋಳ, ಈರುಳ್ಳಿ ಬೆಳೆಗಳ ಕುರಿತ ಕೃಷಿ ಕೈಪಿಡಿಯನ್ನು ರೈತರಿಗೆ ನೀಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net