More

    ಹೊಂದಾಣಿಕೆಯಿಂದ ಅಭಿವೃದ್ಧಿ

    ಚಿಕ್ಕಮಗಳೂರು: ಜಿಲ್ಲಾಡಳಿತದೊಂದಿಗೆ ಇತರೆ ಇಲಾಖೆ ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯವಾಯಿತು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

    ನಗರಸಭೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಒಬ್ಬರಿಂದ ಯಾವುದೇ ಕೆಲಸ ಮಾಡುವುದು ಸಾಧ್ಯವಿಲ್ಲ. ಎಲ್ಲ ಅಧಿಕಾರಿಗಳೂ ಒಗ್ಗೂಡಿದಾಗ ಸಾರ್ವಜನಿಕ ಬದುಕಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಏಕ್ ಭಾರತ್, ಶ್ರೇಷ್ಠ ಭಾರತ್ ಮಾತಿನಂತೆ ಎಲ್ಲ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಿದ್ದರಿಂದ ಚಿಕ್ಕಮಗಳೂರು ಹಬ್ಬ ಯಶಸ್ವಿಯಾಗಿ ಭಾರತ ಸಂಸ್ಕೃತಿ ಬಿಂಬಿಸಲು ಸಾಧ್ಯವಾಯಿತು ಎಂದು ತಿಳಿಸಿದರು.
    ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ನಗರಸಭೆ ಚುನಾಯಿತ ಪ್ರತಿನಿಧಿಗಳ ಅಧಿಕಾರವಧಿ ಮುಕ್ತಾಯಗೊಂಡಾಗ 10 ತಿಂಗಳು ನಗರಸಭೆಗೆ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ವಿವಿಧ 13 ಸಮಿತಿಗಳನ್ನು ರಚಿಸಿ ಒಂದೊಂದು ಸಮಿತಿಗೆ ಒಬ್ಬ ಸರ್ಕಾರಿ ಅಧಿಕಾರಿಯನ್ನು ನೇಮಕ ಮಾಡಿ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಿದ್ದಾರೆ ಎಂದರು.
    ಪೌರಾಯುಕ್ತ ಉಮೇಶ್, ನಗರಸಭೆ ಸದಸ್ಯರಾದ ರೂಪಕುಮಾರ್, ಪರಮೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts