

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠ ವಾರ್ಡ್ನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಮಾಲೋಚನೆಯನ್ನು ಅಬಕಾರಿ ಸಚಿವ ಕೆ. ಗೋಪಾಲಯ್ಯ ನಡೆಸಿದರು.
ಕೋವಿಡ್ ಅವಧಿಯಲ್ಲಿ ಉಚಿತವಾಗಿ ಆರೋಗ್ಯ ಕಿಟ್ ಹಾಗೂ ಆಹಾರ ಕಿಟ್, ಆಕ್ಸಿಜನ್, ಮಾತ್ರೆಗಳನ್ನು ನೀಡಿ ಜನಸಾಮಾನ್ಯರ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನ ಜೊತೆ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಕ್ಷೇತ್ರದ ಜನರ ಉಳಿವಿಗಾಗಿ ಬಹಳ ಕಾಳಜಿ ವಹಿಸಲಾಗಿದೆ ಎಂದು ತಿಳಿಸಿದರು.
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ, ಜನಸಾಮಾನ್ಯರ ಅನುಕೂಲವಾಗುವ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಮೂರು ಬಾರಿ ಶಾಸಕನಾಗಿ ತಮ್ಮೆಲ್ಲರ ಆಶೀರ್ವಾದ ಹಾಗೂ ಹೆಚ್ಚಿನ ಸಹಕಾರದಿಂದ ಅಬಕಾರಿ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ಇದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಶಾಸಕನಾದ ಮೇಲೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ಘಟಕ, ನಮ್ಮ ಕ್ಲಿನಿಕ್, ನವ ನಂದಿನಿ ಪಾರ್ಕ್, ಗುಣಮಟ್ಟದ ಕಾಮಗಾರಿಯ ರಸ್ತೆಗಳು, ಕೃಷ್ಣಾನಂದ ನಗರದಲ್ಲಿನ ಶಾಲೆಗಳು, ಬ್ಯಾಡ್ಮಿಂಟನ್ ಕೋರ್ಟ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಉಪಮೇಯರ್ ಎಸ್.ಹರೀಶ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯರಾಮ್ ಅವಿನ್ ಆರಾಧ್ಯ ಸೇರಿ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಉಪಸ್ಥಿತರಿದ್ದರು.